ಶಿವಮೊಗ್ಗ: ಇಂದಿನ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಪ್ರಭಾವವನ್ನ ಮತ್ತಷ್ಟು ಹೊಳಪುಗೊಳಿಸಿದೆ. ಬಿಜೆಪಿ ಅತ್ಯಂತ ಬಲಿಷ್ಠವಾಗಿರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.
ಉಪಚುನಾವಣೆ ಫಲಿತಾಂಶದ ಕುರಿತು ಈ ಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರ ನಾಯಕತ್ವವನ್ನು ಎಲ್ಲ ಜಾತಿ, ಧರ್ಮದ ಜನರು ಒಪ್ಪಿದ್ದಾರೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ. ಈ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಪಡೆದಿದ್ದ ಯಡಿಯೂರಪ್ಪ ಅವರನ್ನ ವಂಚಿಸಿ ಬಹುಮತ ಇಲ್ಲದ ಎರಡು ಪಕ್ಷಗಳು ಸೇರಿ ಅಧಿಕಾರ ಹಿಡಿದಿದ್ದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಯಡಿಯೂರಪ್ಪರನ್ನ ಬೆಂಬಲಿಸಿ ರಾಜೀನಾಮೆ ನೀಡಿದ ಎಲ್ಲ ಶಾಸಕರನ್ನು ಗೆಲ್ಲಿಸುವ ಮೂಲಕ ಯಡಿಯೂರಪ್ಪರ ನಾಯಕತ್ವವನ್ನು ಪುನರ್ ಪ್ರತಿಷ್ಠಾಪನೆ ಮಾಡಿದ ಜನತೆ, ಕಾರ್ಯಕರ್ತರು ಹಾಗೂ ಗೆದ್ದಂತಹ ಶಾಸಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.