ಶಿವಮೊಗ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪಿಜಿ ಸೆಂಟರ್ ವತಿಯಿಂದ ಜ.18ರಂದು ಬೆಳಗ್ಗೆ 10ಕ್ಕೆ ಕಾಲೇಜು ಸಭಾಂಗಣದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಪ್ರಾಂಶುಪಾಲ ಬಿ.ಆರ್.ಧನಂಜಯ ಅವರು ಈ ಕುರಿತು ಮಾಹಿತಿ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ 300 ರಿಂದ 350 ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು.
ಈಗಾಗಲೇ ನೂರಕ್ಕೂ ಹೆಚ್ಚು ಪ್ರಬಂಧಗಳು ತಲುಪಿವೆ. ಅವೆಲ್ಲವೂ ಅಂದು ಮಂಡನೆಯಾಗಲಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿ ವೀರಭದ್ರಪ್ಪ, ಡಿಸಿಇ ಜಂಟಿ ನಿರ್ದೇಶಕ ಕೆ.ಸಿ.ವೀರಭದ್ರಯ್ಯ ಭಾಗವಹಿಸಲಿದ್ದಾರೆ ಎಂದರು.