ETV Bharat / city

ಆಯುಷ್ಮಾನ್ ಭಾರತ್ ಯೋಜನೆಗೆ ಒಂದು ವರ್ಷ: ಜಾಥಾಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ - ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ

ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲಾಡಳಿತದ ಸಹಯೋಗದೊಂದಿಗೆ ನಡೆಸಿದ ಜಾಥಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಸಿರು ನಿಶಾನೆ ತೋರಿಸಿದರು.

ಆಯುಷ್ಮಾನ್ ಭಾರತ್ ಯೋಜನೆ
author img

By

Published : Sep 17, 2019, 10:28 PM IST

ಶಿವಮೊಗ್ಗ: ಒಂದು ದೇಶ ಸಮೃದ್ಧಿಯಾಗಿರಬೇಕಾದ್ರೆ, ಆ ದೇಶ ಆರೋಗ್ಯಕರವಾಗಿರಬೇಕು. ಈ ನಿಟ್ಟಿನಲ್ಲಿ ದೇಶದ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ನರೇಂದ್ರ ಮೋದಿರವರು ದೇಶದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಆಯುಷ್ಮಾನ್ ಭಾರತ್ ಯೋಜನೆ ಜಾಥಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ

ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲಾಡಳಿತದ ಸಹಯೋಗದೊಂದಿಗೆ ನಡೆಸಿದ ಜಾಥಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಸಂಸದರು, ನಮ್ಮ ಭಾರತದಂತಹ ದೇಶದಲ್ಲಿ ಇನ್ನೂ ಕಡು ಬಡವರಿದ್ದಾರೆ. ಅವರಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಮೋದಿಯವರು ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್​ದಾರರಿಗೆ 5 ಲಕ್ಷದ ವರೆಗೆ ಹಾಗೂ ಎಪಿಎಲ್ ಕಾರ್ಡ್​ದಾರರಿಗೆ ವರ್ಷಕ್ಕೆ‌ 1.50 ಲಕ್ಷದ ವರೆಗೆ ರೂ. ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲೇ ಸುಮಾರು 7 ಸಾವಿರ ಕುಟುಂಬಗಳು 20 ಕೋಟಿ ರೂ‌.ನಷ್ಟು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಜಾಥದಲ್ಲಿ ಸಂಸದರಿಗೆ ಜಿಲ್ಲಾಧಿಕಾರಿ ಶಿವಕುಮಾರ್, ಡಿಹೆಚ್ಓ ರಾಜೇಶ್ ಸೂರಗಿಹಳ್ಳಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಿಂದ ಮೆಗ್ಗಾನ್ ಆಸ್ಪತ್ರೆ ವರೆಗೂ ಸಾಗಿದ ಜಾಥದಲ್ಲಿ‌ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳು ಭಾಗಿಯಾಗಿದ್ದರು.

Intro:ಒಂದು ದೇಶ ಸಮೃದ್ದಿಯಾಗಿರಬೇಕಾದ್ರೆ ಆ ದೇಶ ಆರೋಗ್ಯಕರವಾಗಿರಬೇಕು. ಈ ನಿಟ್ಟಿನಲ್ಲಿ ದೇಶದ ಜನರ ಎಲ್ಲಾ ವರ್ಗದ ಜನರಿಗೆ ಆರೋಗ್ಯ ಸಿಗಬೇಕು ಎಂಬ ಉದ್ದೇಶದಿಂದ ಪ್ರದಾನ ಮಂತ್ರಿ ನರೇಂದ್ರ ಮೋದಿರವರು ದೇಶದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬಂದು ಒಂದು ವರ್ಷವಾದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಜಿಲ್ಲಾಡಳಿತದ ಸಹಯೋಗದೊಂದಿಗೆ ನಡೆಸಿದ ಜಾಥಕ್ಕೆ ಹಸಿರು ನಿಸಾನೆ ತೋರಿ ಮಾತನಾಡಿದ ಸಂಸದರು,

Body:ನಮ್ಮ ಭಾರತದಂತಹ ದೇಶದಲ್ಲಿ ಇನ್ನೂ ಕಡು ಬಡವರಿದ್ದಾರೆ. ಅವರಿಗೆ ಅವರಿಗೆ ಆರೋಗ್ಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಮೋದಿರವರು ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಲಕ್ಷದವರೆಗೆ ಚಿಕಿತ್ಸ ವೆಚ್ಚ ಭರಿಸಲಾಗುತ್ತದೆ. ಅದೇ ರೀತಿ ಎಪಿಎಲ್ ಕಾರ್ಡ್ ದಾರರಿಗೆ ವರ್ಷಕ್ಕೆ‌ 1.50 ಲಕ್ಷ ರೂ ಚಿಕಿತ್ಸ ವೆಚ್ಚ ಭರಿಸಲಾಗುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 7 ಸಾವಿರ ಕುಟುಂಬಗಳು 20 ಕೋಟಿ ರೂ‌ನಷ್ಟು ಈ ಯೋಜನೆಯ ಪ್ರಯೋಜನ ಪಡೆದು ಕೊಂಡಿದ್ದಾರೆ ಎಂದರು.

Conclusion:ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಾಥಕ್ಕೆ‌ ಚಾಲನೆ ನೀಡಿದ ಸಂಸದರು ಜಾಥದ ಜೊತೆ ಸಾಗಿದರು. ಇವರಿಗೆ ಜಿಲ್ಲಾಧಿಕಾರಿ ಶಿವಕುಮಾರ್, ಡಿಹೆಚ್ಓ ರಾಜೇಶ್ ಸೂರಗಿಹಳ್ಳಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ಜಾಥವು ಜಿಲ್ಲಾಧಿಕಾರಿ ಕಚೇರಿಯಿಂದ ಮೆಗ್ಗಾನ್ ಆಸ್ಪತ್ರೆ ವರೆಗೂ ಸಾಗಿತು. ಜಾಥದಲ್ಲಿ‌ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳು ಭಾಗಿಯಾಗಿದ್ದರು.

ಬೈಟ್: ಬಿ.ವೈ.ರಾಘವೇಂದ್ರ. ಸಂಸದರು.

ಕಿರಣ್ ಕುಮಾರ್. ಶಿವಮೊಗ್ಗ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.