ಶಿವಮೊಗ್ಗ: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರ ಸಂಸ್ಮರಣಾ ಕಾರ್ಯಕ್ರಮವನ್ನ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.
ಶ್ರೀಗಳು ಶಿವಮೊಗ್ಗ ಶ್ರೀಗಂಧ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದರು. ಸಂಸ್ಥೆ ಪ್ರಾರಂಭವಾದ 25 ವರ್ಷಗಳಿಂದಲೂ ಅವರೇ ಗೌರವಾಧ್ಯಕ್ಷರಾಗಿದ್ದರು. ನಗರದ ಸಾಗರ ರಸ್ತೆಯಲ್ಲಿರುವ ದ್ವಾರಕ ಕನ್ವೆಷನ್ ಹಾಲ್ನಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ ಎಂದರು.