ETV Bharat / city

ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲಿಯೇ ಸಾವು - ಶಿವಮೊಗ್ಗ ಅಪಘಾತ ಸುದ್ದಿ

ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಓರ್ವ ಪಾದಚಾರಿ ಸಾವನ್ನಪ್ಪಿರುವುದು ಮಾತ್ರವಲ್ಲದೇ, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

pedestrian dies in an accident in shimogga
ಆಯಿಲ್ ಟ್ಯಾಂಕರ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲಿಯೇ ಸಾವು
author img

By

Published : May 6, 2021, 9:36 PM IST

ಶಿವಮೊಗ್ಗ: ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸೊರಬ ಅಂಕರವಳ್ಳಿ ಗ್ರಾಮದಲ್ಲಿ ನಡೆದಿದೆ.

ಚಂದ್ರಗುತ್ತಿಯಿಂದ ಸೊರಬಕ್ಕೆ ಬರುತ್ತಿದ್ದ ಆಯಿಲ್ ಟ್ಯಾಂಕರ್ ಕೆ. ಹನೀಫ್ ಸಾಬ್ (55) ಎಂಬುವವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಹನೀಫ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಹೊಸದಾಗಿ ಮದುವೆ: ಶೌಚಾಲಯಕ್ಕೆ ಹೋಗುವುದಾಗಿ ಹೇಳಿ ಲವರ್ ಜೊತೆ ಯುವತಿ ಪರಾರಿ

ಪಾದಚಾರಿಗೆ ಡಿಕ್ಕಿ ಹೊಡೆದ ನಂತರ ಲಾರಿ ರಸ್ತೆ ಬದಿಯ ಎರಡು ಮರಗಳಿಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಕಿರಣ್ ಹಾಗೂ ಕ್ಲೀನರ್​​ ಮಹೇಶ್​​ಗೆ ಗಾಯವಾಗಿದ್ದು, ಅವರನ್ನು ಸೊರಬದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.