ಶಿವಮೊಗ್ಗ: ಡಾ. ಗಿರೀಶ್ ಕಾರ್ನಾಡ್ ನಿಧನರಾದ ಹಿನ್ನೆಲೆ ಉಡುಪಿಯ ಪೇಜಾವರಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಶಿವಮೊಗ್ಗದಲ್ಲಿ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಬರ್ತ್ಡೇ ಕಾರ್ಯಕ್ರಮಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಗಿರೀಶ್ ಕಾರ್ನಾಡ್ ಅವರಿಗೂ ನಮಗೂ ತಾತ್ವಿಕ ಭಿನ್ನಾಭಿಪ್ರಾಯವಿದೆ. ಆದ್ರೂ ಅವರು ಒಳ್ಳೇ ಸಾಹಿತಿಯಾಗಿದ್ದರು. ಸಾಹಿತ್ಯ ಲೋಕಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ನಾಡಿಗೆ ನಷ್ಟವನ್ನುಂಟು ಮಾಡಿದೆ. ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದರು. ರಾಜ್ಯದಲ್ಲಿ ಮಳೆ ಸರಿಯಾಗಿ ಆಗುತ್ತಿಲ್ಲ. ಈ ಕುರಿತು ಎಲ್ಲರೂ ಚಿಂತನೆ ನಡೆಸಬೇಕಿದೆ. ನೇತ್ರಾವತಿ ನದಿ ತಿರುವು ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಬೇಕಿದೆ ಎಂದರು. ಇದೇ ವೇಳೆ ಸಿಎಂ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ಮಾಡುವುದು ಒಳ್ಳೇ ಬೆಳವಣಿಗೆಯಾಗಿದೆ. ಅಭಿವೃದ್ದಿ ಕಾರ್ಯಕ್ಕೆ ನಮ್ಮ ಬೆಂಬಲ ಯಾವಾಗಲೂ ಇರುತ್ತದೆ ಎಂದರು.