ಶಿವಮೊಗ್ಗ: ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ, ಗರ್ಭಿಣಿಯಾದ ಬಳಿಕ ಮದುವೆಯಾಗಿದ್ದ ಆರೋಪಿಗೆ ನಗರದ ಎಫ್ಟಿಎಸ್ಸಿ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಜಿಲ್ಲೆಯ ಯಲವಟ್ಟಿ ತಾಂಡದ ಎಸ್. ಆರ್. ಬೀರೇಶ್ (30), ಭದ್ರಾವತಿಯ ಚೌಡೇಶ್ವರಿ ದೇವಸ್ಥಾನದಲ್ಲಿ ಬಾಲಕಿಯನ್ನು 2017ರ ಜೂನ್ 28ರಂದು ಮದುವೆಯಾಗಿದ್ದ. ಈ ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಐಪಿಸಿ ಕಾಲಂ 366, 376 (2) ಎನ್, ಪೊಕ್ಸೊ ಕಾಯ್ದೆ ಮತ್ತು ಬಾಲ್ಯ ವಿವಾಹ ಕಾಯ್ದೆಯಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಎಪ್ಟಿಎಸ್ಸಿ-1 ನ್ಯಾಯಾಲಯದ ನ್ಯಾಯಾಧೀಶ ದಯಾನಂದ ಅವರು ಆರೋಪಿಗೆ ಹತ್ತು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದ್ದಾರೆ ಆದೇಶಿಸಿದ್ದಾರೆ.