ಶಿವಮೊಗ್ಗ : ಸುಪ್ರೀಂಕೋರ್ಟ್ನಿಂದ ಜಾಮೀನು ಪಡೆದು ಹೊರಗೆ ಬಂದ ಬಳಿಕ ಸುಲಿಗೆ ಸೇರಿದಂತೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಶಿವಮೊಗ್ಗದ ರೌಡಿಶೀಟರ್ ಹರ್ಷದ್(24) ಎಂಬಾತನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಇಂದು ಅನುಪಿನಕಟ್ಟೆಯಲ್ಲಿ ಆರೋಪಿ ಹರ್ಷದ್ ಸುಲಿಗೆ ನಡೆಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪಡೆದು ತುಂಗಾನಗರ ಠಾಣೆ ಪಿಎಸ್ಐ ಮಂಜುನಾಥ್ ನೇತೃತ್ವದ ತಂಡ ಸ್ಥಳಕ್ಕೆ ದೌಡಾಯಿಸಿತ್ತು. ಆಗ ಪೊಲೀಸರ ಮೇಲೆಯೇ ಆರೋಪಿ ಹಲ್ಲೆಗೆ ಮುಂದಾಗಿದ್ದಾನೆ.
ಈ ವೇಳೆ ಪೊಲೀಸರು ಹರ್ಷದ್ ಮೇಲೆ ಗುಂಡು ಹಾರಿಸಿದ್ದಾರೆ. ರೌಡಿಶೀಟರ್ ಕಾಲಿಗೆ ಗುಂಡೇಟು ಬಿದ್ದಿದೆ. ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಭೀಕರ ಅಪಘಾತ : ಹೊತ್ತಿ ಉರಿದ ಬಸ್ನಲ್ಲಿ 7 ಜನ ಸಜೀವ ದಹನ ಶಂಕೆ!