ಶಿವಮೊಗ್ಗ: ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸರಿಂದ ನಗರದಲ್ಲಿ ಪಥಸಂಚಲನ ನಡೆಯಿತು.
ಹಬ್ಬದ ವೇಳೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಆರ್ಎಎಫ್ ಸಿಬ್ಬಂದಿಯಿಂದ ಪಥಸಂಚಲನ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ನಡೆದ ಪಥಸಂಚಲನದಲ್ಲಿ ಪೊಲೀಸ್ ಅಧಿಕಾರಿಗಳು, ಆರ್ಎಎಫ್ ಸಿಬ್ಬಂದಿ ಭಾಗವಹಿಸಿದ್ದರು.