ಶಿವಮೊಗ್ಗ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆಯುವ ಮೂಲಕ ಎಂ.ಪ್ರವೀಣ್ ಕುಮಾರ್ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
2011ರಿಂದ ಪ್ರಾರಂಭವಾದ ಯುವ ಕಾಂಗ್ರೆಸ್‍ನ ಆಂತರಿಕ ಚುನಾವಣೆ ಇಲ್ಲಿಯವರೆಗೂ 4 ಚುನಾವಣೆ ನಡೆದಿದ್ದು, ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಅವಕಾಶ ಸಿಕ್ಕಿರುವುದು ಜಿಲ್ಲೆಯ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯಕರ್ತರ ಸಂತೋಷಕ್ಕೆ ಕಾರಣವಾಗಿದೆ.
ಪ್ರವೀಣ್ ಕುಮಾರ್ ಈ ಹಿಂದೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.