ETV Bharat / city

ಶಿವಮೊಗ್ಗ: ಖಾಸಗಿ ಬಸ್ ಪ್ರಯಾಣ ದರ ಶೇ 25ರಷ್ಟು ಹೆಚ್ಚಳ.. ಭಾರವಾದ ಬದುಕು! - shivmogga private bus news

ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ದರ ಹೆಚ್ಚಳದ ಕುರಿತು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

Private bus
Private bus
author img

By

Published : Jul 30, 2021, 7:09 AM IST

Updated : Jul 30, 2021, 9:01 AM IST

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ನಮ್ಮ ಜಿಲ್ಲೆಯಲ್ಲಿ ಸಹ ದರ ಹೆಚ್ಚಳದ ಕುರಿತು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶಿವಮೊಗ್ಗದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆ

ಖಾಸಗಿ ಮತ್ತು ಕೆಎಸ್‍ಆರ್​ಟಿಸಿ ಬಸ್‍ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡೂ ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್‍ಗಳನ್ನು ತಡೆದು ನಿಲ್ಲಿಸಿ, ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಸೂಚಿಸಿದರು.

ಆಟೋ ರಿಕ್ಷಾ ಪ್ರಯಾಣದ ಕನಿಷ್ಠ ದರವನ್ನು ರೂ.40 ಕ್ಕೆ ಪರಿಷ್ಕರಿಸಬೇಕು ಎಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಠ ದರ ಸೇರಿದಂತೆ ಎಲ್ಲ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ, ಶಿವಮೊಗ್ಗ ನಗರದ 20 ಕಿ.ಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕು ಎಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಆಟೋ ಪರವಾನಗಿ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಗಿ ಅಗತ್ಯವಿಲ್ಲ. ಆದರೆ, ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಆಟೋ ಮೀಟರ್ ಹಾಕದಿರುವುದು, ಹೆಚ್ಚಿನ ದರ ವಸೂಲಿ ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಆರ್​ಟಿಒ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Last Updated : Jul 30, 2021, 9:01 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.