ETV Bharat / city

ಹಿಂದೂ ಕಾರ್ಯಕರ್ತರು ಕೈಗಳಿಗೆ ಬಳೆ ತೊಟ್ಟಿಲ್ಲ: ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗದ ಗೋಪಿ ವೃತ್ತದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷದ್​​ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಸಂಸದ ಬಿ ವೈ ರಾಘವೇಂದ್ರ, ಕೆ.ಎಸ್. ಈಶ್ವರಪ್ಪ ಭಾಗವಹಿಸಿದರು.

Bjp youth leader murder in karnataka
ಪ್ರತಿಭಟನೆ
author img

By

Published : Jul 29, 2022, 9:35 PM IST

ಶಿವಮೊಗ್ಗ : ಹಿಂದೂ ಕಾರ್ಯಕರ್ತರು ಕೈಗಳಿಗೆ ಬಳೆ ತೊಟ್ಟಿಲ್ಲ. ಜಿಹಾದಿಗಳಿಗೆ ಬೆನ್ನು ತೋರಿಸಿಲ್ಲ. ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ. ಯಾವುದೇ ಕಾರಣಕ್ಕೂ ಇನ್ಮುಂದೆ ಇನ್ನೊಬ್ಬ ಹಿಂದೂ ಕಾರ್ಯಕರ್ತನ ನೆತ್ತರು ಮತ್ತೆ ಹರಿಯದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.

ಗೋಪಿ ವೃತ್ತದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷದ್​​ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ವಿಚಾರಗಳನ್ನು ಸಂಪೂರ್ಣವಾಗಿ ರಾಷ್ಟ್ರ ಒಪ್ಪಿಕೊಳ್ಳಬೇಕಿದೆ. ಆದರೆ, ಅದಕ್ಕಾಗಿ ಅನೇಕ ಹಿಂದೂಗಳ ತ್ಯಾಗ ಬಲಿದಾನ ಆಗುತ್ತಿರುವುದು ನಮ್ಮ ದೌರ್ಭಾಗ್ಯವಾಗಿದೆ. ಇನ್ನೆಷ್ಟು ಹಿಂದೂ ಕಾರ್ಯಕರ್ತರ ಬಲಿ ಆಗಬೇಕಿದೆ ಎಂದು ಪ್ರಶ್ನಿಸಿದರು.

ಹಿಂದೂ ಕಾರ್ಯಕರ್ತರು ಕೈಗಳಿಗೆ ಬಳೆ ತೊಟ್ಟಿಲ್ಲ

ಈಗಾಗಲೇ ದೇಶ ಮತ್ತು ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದ್ದರೂ ಹಿಂದೂಗಳಿಗೆ ರಕ್ಷಣೆ ಸಿಗುತ್ತಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಸಮಾಜದಲ್ಲಿ ಮತೀಯವಾದಿಗಳು ಕ್ಯಾನ್ಸರ್‌ನಂತೆ ಹಬ್ಬಿದ್ದಾರೆ. ಈಗಾಗಲೇ ಮೂರನೇ ಹಂತ ತಲುಪಿದ್ದು ಒಂದೇ ಬಾರಿಗೆ ನಿರ್ಮೂಲನೆ ಮಾಡುವುದು ಸಾಧ್ಯವಿಲ್ಲ. ಹಂತ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದರು.

ಪ್ರತಿಭಟನಾ ಸಭೆಯಲ್ಲಿ ಪ್ರಮುಖರಾದ ಕೆ.ಎಸ್. ಈಶ್ವರಪ್ಪ, ಪಟ್ಟಾಭಿರಾಂ, ವಾಸುದೇವ್, ಎಂ.ಬಿ. ಭಾನುಪ್ರಕಾಶ್, ಡಿ.ಎಸ್. ಅರುಣ್, ಎಸ್. ರುದ್ರೇಗೌಡ, ಸುನಿತಾ ಅಣ್ಣಪ್ಪ, ಚನ್ನಬಸಪ್ಪ ಮೊದಲಾದವರಿದ್ದರು.

ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ : ಪ್ರವೀಣ್ ನೆಟ್ಟೂರ್ ಹತ್ಯೆ ಖಂಡಿಸಿ ನಗರದ ಗೋಪಿ ವೃತ್ತದಲ್ಲಿ ಕರೆದಿದ್ದ ಪ್ರತಿಭಟನೆಯಲ್ಲಿ ಹಿಂದೂಪರ ಕಾರ್ಯಕರ್ತರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಪ್ರತಿಭಟನೆ ವೇಳೆ ಬಜರಂಗದಳದ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಯುಪಿ ಮಾದರಿಯ ಕಾನೂನು ಜಾರಿಗೆ ತರುವ ಮೂಲಕ ಪ್ರವೀಣ್ ನೆಟ್ಟೂರು ಹತ್ಯೆ ಆರೋಪಿಗಳಿಗೆ ಎನ್​ ಕೌಂಟರ್ ಮಾಡಬೇಕು ಎಂದು ಆಗ್ರಹಿಸಿ ಯೋಗಿ, ಯೋಗಿ ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಅವರನ್ನು ಸಮಾಧಾನ ಪಡಿಸಲು ಹೋದ ಸಮಯದಲ್ಲಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ : ನಮ್ಮ ಸರ್ಕಾರ ಇಸ್ಲಾಮಿಕ್ ಜಿಹಾದಿ ಮಾನಸಿಕತೆ ಇಲ್ಲವಾಗಿಸುವ ಪ್ರತಿಬದ್ಧತೆ ಹೊಂದಿದೆ: 15 ಲಕ್ಷ ಪರಿಹಾರ ಘೋಷಿಸಿದ ತೇಜಸ್ವಿ ಸೂರ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.