ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನಲ್ಲಿ ಕೊಳೆ ರೋಗಕ್ಕೆ ತುತ್ತಾಗಿರುವ ಅಡಿಕೆಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ರೈತರು ಕೊಳೆ ಅಡಿಕೆ ಸುರಿದು ಪ್ರತಿಭಟನೆ ನಡೆಸಿದ್ರು.
ಮೂರ್ನಾಲ್ಕು ಬಾರಿ ಔಷಧಿ ಸಿಂಪಡಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊಳೆ ರೋಗಕ್ಕೆ ತುತ್ತಾಗಿರುವ ಅಡಿಕೆ ತೋಟದ ಸಮೀಕ್ಷೆ ನಡೆಸಬೇಕು. ರೈತರಿಂದ ಅರ್ಜಿ ಪಡೆಯುವಾಗ ಪಹಣಿ ಪಡೆಯುವ ಪದ್ಧತಿಯನ್ನು ಕೈಬಿಟ್ಟು, ಸರ್ವೆ ನಂಬರ್ ಮಾತ್ರ ನಮೂದಿಸುವಂತೆ ಸೂಚಿಸಬೇಕು. ತುರ್ತಾಗಿ ಕೊಳೆರೋಗಕ್ಕೆ ತುತ್ತಾಗಿರುವ ಅಡಿಕೆ ಬೆಳೆಗೆ ಪರಿಹಾರ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂತರ ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಅಡಿಕೆ ಬೆಳೆಗಾರರು ಮನವಿ ಸಲ್ಲಿಸಿದರು.