ಮಂಗಳೂರು/ ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರನ್ನು ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಪಿಎಸ್ ಅಧಿಕಾರಿ ಕೆ.ಎಂ. ಶಾಂತರಾಜು ಅವರನ್ನು ಬೆಂಗಳೂರು ನಗರದ ಪೂರ್ವ ಟ್ರಾಫಿಕ್ ವಿಭಾಗದ ಡೆಪ್ಯೂಟಿ ಕಮಿಷನರ್ ಆಗಿ ನೇಮಿಸಲಾಗಿದೆ. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಂ. ಲಕ್ಷ್ಮೀ ಪ್ರಸಾದ್ ಅವರನ್ನು ನೇಮಿಸಲಾಗಿದೆ.
ಬಿ.ಎಂ ಲಕ್ಷ್ಮೀ ಪ್ರಸಾದ್ ಅವರು ಬೆಳ್ತಂಗಡಿ ಮಗು ಅಪಹರಣ ಪ್ರಕರಣದಲ್ಲಿ ಮಗುವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ಆರೋಪಿಗಳ ಬಂಧನ ಸೇರಿದಂತೆ ಮಹತ್ವದ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಗೆ ಯಾದಗಿರಿ ಎಸ್ಪಿಯಾಗಿದ್ದ ಸೋನವಾನೆ ರಿಶಿಕೇಷ್ ಭಗವಾನ್ ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ.. ದೇಶ ಸೇವೆಗೆ ಸಜ್ಜಾದ್ರು ವೀರ ವನಿತೆಯರು: ಹೀಗಿತ್ತು ಸೇನೆ ಸೇರಲು ನಡೆಸಿದ ಕಸರತ್ತು..