ಶಿವಮೊಗ್ಗ: ದೆಹಲಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗ ಒಲಂಪಿಯಾಡ್ 2022 ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಭಾಗವಹಿಸಿ ಬೆಳ್ಳಿಯ ಪದಕ ಪಡೆಯುವ ಮೂಲಕ ಜಿಲ್ಲೆಗೆ ಮಾತ್ರವಲ್ಲದೇ ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
ಗ್ರಾಮೀಣ ಪ್ರತಿಭೆ ಕೆ.ಎನ್.ಕಾವ್ಯ ಬೆಳ್ಳಿ ಪದಕ ಪಡೆದ ವಿದ್ಯಾರ್ಥಿನಿ. ಗರ್ತಿಕೆರೆ ಸಮೀಪದ ಎಣ್ಣೆನೋಡ್ಲು ಗ್ರಾಮದ ನಾಗರಾಜ್ ಮತ್ತು ಯಶೋಧಮ್ಮ ದಂಪತಿ ಪುತ್ರಿ. ಜೂನ್ 19ರಂದು ದೆಹಲಿಯ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನಲ್ಲಿ ನಡೆದ 16 ವರ್ಷದೊಳಗಿನ ರಾಷ್ಟ್ರಮಟ್ಟದ ಯೋಗ ಒಲಂಪಿಯಾಡ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಮೊದಲ ಬಾರಿಗೆ ರಾಜ್ಯಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾಳೆ.
ಬೆಳ್ಳಿ ಪದಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿ ಕಾವ್ಯ ಕೆ.ಎನ್ಗೆ ಹುಂಚದಕಟ್ಟೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಶ್ವಾನ ಜೋಡಿಗೆ ಹಿಂದೂ ಸಂಪ್ರದಾಯಂತೆ ಮದುವೆ.. ಮಕ್ಕಳಿಗಾಗಿ ಹರಕೆ ಹೊತ್ತ ದಂಪತಿ ನಡೆಸಿತು ವಿವಾಹ