ETV Bharat / city

ಶಿವಮೊಗ್ಗ: ಹರ್ಷನ ಮನೆಗೆ ಕಾಂಗ್ರೆಸ್ ಮುಖಂಡರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ - congress leaders visited harsha home

ಶನಿವಾರದಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಮುಖಂಡರು ಮೃತ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

shivamogga congress leaders visited harsha home
ರ್ಷನ ಮನೆಗೆ ಕಾಂಗ್ರೆಸ್ ಮುಖಂಡರ ಭೇಟಿ
author img

By

Published : Feb 27, 2022, 9:24 AM IST

ಶಿವಮೊಗ್ಗ: ಇತ್ತೀಚೆಗೆ ಕೊಲೆಯಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಮನೆಗೆ ಜಿಲ್ಲಾ ಕಾಂಗ್ರೆಸ್​ ಮುಖಂಡರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಹರ್ಷನ ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೂ ಸಹ ಹರ್ಷ ಅವರ ಮನೆಗೆ ಬರುತ್ತಾರೆ. ನಾಯಕರಿಬ್ಬರೂ ಈ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ನಮ್ಮ ನಾಯಕರು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.

ಹರ್ಷನ ಮನೆಗೆ ಕಾಂಗ್ರೆಸ್ ಮುಖಂಡರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಇದೇ ವೇಳೆ, ಇಷ್ಟು ದಿನ 114 ಸೆಕ್ಷನ್ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ತಡವಾಗಿ ಬಂದಿದ್ದೇವೆ ಎಂದು ಅವರು ಇದೇ ವೇಳೆ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ; ಇನ್ನಷ್ಟು ಮಾಹಿತಿ ಕಲೆಹಾಕುತ್ತಿರುವ ಗುಪ್ತಚರ ಇಲಾಖೆ!

ಹರ್ಷನ ಹತ್ಯೆಯ ಹಿಂದೆ ಯಾವ ಸಂಘಟನೆಯ ಪಾತ್ರವಿದೆ ಎಂದು ಪೊಲೀಸ್ ಇಲಾಖೆ ಪತ್ತೆ ಹಚ್ಚಬೇಕು. ಈ ಸಂಬಂಧ ಸಹಾಯ ನೀಡಲು ಕಾಂಗ್ರೆಸ್ ಸಿದ್ಧವಿದೆ ಎಂದರು.

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಮುಖಂಡ ಮಂಜುನಾಥ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.