ETV Bharat / city

ಸಾಮೂಹಿಕ ಭೋಜನ, ಪ್ರಸಾದ ವಿತರಣೆಗೆ ಮಾರ್ಗಸೂಚಿ ಹೊರಡಿಸಿದ ಶಿವಮೊಗ್ಗ ಡಿಸಿ - issued the guidelines for the mass dinner

ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆ ವೇಳೆ ಅವಘಡಗಳು ಸಂಭವಿಸದಿರಲು ಜಿಲ್ಲಾಡಳಿತ ಜಾತ್ರೆ, ಉತ್ಸವ ಸೇರಿದಂತೆ ವಿವಿಧೆಡೆ ಸಾಮೂಹಿಕ ಭೋಜನ, ಅನ್ನ ಸಂತರ್ಪಣೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಸೂಚಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

shimoga district collector
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ
author img

By

Published : Nov 22, 2021, 8:14 PM IST

ಶಿವಮೊಗ್ಗ: ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆ ವೇಳೆ ಜಿಲ್ಲೆಯಲ್ಲಿ ನಡೆದ ಕೆಲ ಅವಘಡಗಳಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ, ಜಾತ್ರೆ, ಉತ್ಸವ ಸೇರಿದಂತೆ ವಿವಿಧೆಡೆ ಸಾಮೂಹಿಕ ಭೋಜನ, ಅನ್ನ ಸಂತರ್ಪಣೆಯ ವೇಳೆ ಯಾವುದೇ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಸೂಚಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಇದೇ ರೀತಿ ಸರ್ಕಾರಿ ಹಾಸ್ಟೆಲ್‍ಗಳು, ವೃದ್ಧಾಶ್ರಮಗಳು ಹಾಗೂ ಇತರ ಸರ್ಕಾರಿ ಅಥವಾ ಖಾಸಗಿ ಸ್ಥಳಗಳಲ್ಲಿ ಸಾಂಕ್ರಾಮಿಕ ರೋಗಗಳು ಮತ್ತು ಅವಘಡಗಳು ಸಂಭವಿಸಿದಂತೆಯೂ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಮೂಹಿಕ ಭೋಜನ, ಅನ್ನ ಸಂತರ್ಪಣೆ ನಡೆಸುವ ಪೂರ್ವದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಡುಗೆ ಕೋಣೆಯಲ್ಲಿ ಅಪರಿಚಿತ ಅಥವಾ ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ನೋಡಿಕೊಳ್ಳಬೇಕು. ಅಡುಗೆ ಕೋಣೆಯಲ್ಲಿ ಗಾಳಿ ಮತ್ತು ಬೆಳಕಿನ ವ್ಯವಸ್ಥೆ, ಅಡುಗೆಗೆ ಬಳಸುವ ನೀರಿನ ಶುದ್ಧತೆ ಖಾತ್ರಿ, ಪ್ರತಿ 2 ತಿಂಗಳಿಗೊಮ್ಮೆ ನೀರನ್ನು ಆರೋಗ್ಯ ಇಲಾಖೆ ಸಹಕಾರದಿಂದ ಪರೀಕ್ಷೆಗೆ ಒಳಪಡಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಆಹಾರ ತಯಾರಿಕರಿಗೆ ಆರೋಗ್ಯ ತಪಾಸಣೆ ಕಡ್ಡಾಯ

ಬಾಣಸಿಗರು, ಸಹಾಯಕರು, ಬಡಿಸುವವರಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ, ಕೈಗವಸು, ತಲೆಗೆ ಟೊಪ್ಪಿ ಹಾಕಿಸಬೇಕು. ಪ್ರತಿ ಸಿಬ್ಬಂದಿಯನ್ನು 6 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆಗೆ ಒಳಪಡಿಸುವುದು. ಅವರಿಗೆ ಪ್ರತಿ 6 ತಿಂಗಳಿಗೊಮ್ಮೆ ಜಂತು ಹುಳು ನಿವಾರಣಾ ಮಾತ್ರೆಯನ್ನು ನೀಡಬೇಕು. ಅಡುಗೆ ಭಟ್ಟರ ಮತ್ತು ಊಟ ಬಡಿಸುವವರ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಕಲ್ಯಾಣ ಮಂಟಪದ ವ್ಯವಸ್ಥಾಪಕರು ಸ್ಥಳೀಯ ಸರ್ಕಾರಿ ವೈದ್ಯಾಧಿಕಾರಿಗಳಿಗೆ ಮೊದಲೇ ನೀಡಬೇಕು ಎಂದು ಸೂಚಿಸಿದ್ದಾರೆ.

ಎಕ್ಸಪೈರಿ ಡೇಟ್​ ಪರಿಶೀಲಿಸಿ:

ಸಭೆ, ಸಮಾರಂಭಗಳಿಗೆ ಪಡಿತರ ಮತ್ತು ಕುಡಿಯುವ ನೀರು ಖರೀದಿಸುವಾಗ ತಯಾರಿಕೆ ದಿನಾಂಕ, ಮುಕ್ತಾಯ ದಿನಾಂಕ ಪರಿಶೀಲಿಸಬೇಕು. ಏನಾದರೂ ಅವಘಡ ಸಂಭವಿಸಿದರೆ ಪಡಿತರ/ನೀರು ಖರೀದಿಸಿದ ಬಿಲ್ ಆರೋಗ್ಯಾಧಿಕಾರಿಗಳಿಗೆ ನೀಡಬೇಕು. ಅಡುಗೆ ಮನೆಯಲ್ಲಿ ಪಾತ್ರೆ ತೊಳೆದ ನೀರು, ಕೈತೊಳೆದ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ವ್ಯವಸ್ಥೆಯನ್ನು ಮಾಡಬೇಕು. ದಾಸ್ತಾನು ಕೊಠಡಿಯನ್ನು ಸ್ವಚ್ಛವಾಗಿರಿಸಬೇಕು. ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧೆಡೆ ಈ ನಿಯಮ ಕಡ್ಡಾಯ ಜಾರಿಗೆ ಸೂಚನೆ

ದೇವಸ್ಥಾನ, ಅಂಗನವಾಡಿ, ಶಾಲೆ, ವಸತಿಶಾಲೆ, ಹಾಸ್ಟೆಲ್, ಕ್ಯಾಂಟೀನ್, ಕಾರಾಗೃಹ ಮತ್ತು ಆಸ್ಪತ್ರೆ ಕ್ಯಾಂಟೀನ್‍ಗಳಲ್ಲಿನ ಅಡುಗೆ ಕೊಠಡಿ ಮತ್ತು ಊಟದ ಕೊಠಡಿಗಳಲ್ಲಿ ಈ ಎಲ್ಲಾ ಅಂಶಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಯಾವುದೇ ಅವಘಡಗಳು ಸಂಭವಿಸಿದರೆ ಸಂಬಂಧಪಟ್ಟ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಮಾರಂಭದ ಆಯೋಜಕರನ್ನು ನೇರ ಹೊಣೆಗಾರರನ್ನಾಗಿ ಮಾಡಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿವಕುಮಾರ್​ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.