ಶಿವಮೊಗ್ಗ: ಗ್ರಾಮ ಪಂಚಾಯತ್ ಚುನಾವಣಾ ದಿನಾಂಕ ಪ್ರಕಟವಾದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರು ಸಭೆ ನಡೆಸಿ, ಮಹತ್ವದ ವಿಚಾರಗಳ ಕುರಿತು ಚರ್ಚಿಸಿದರು.
ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ತಂತ್ರಗಾರಿಗೆ ಹಾಗೂ ಪಕ್ಷದ ಚುನಾವಣಾ ಸಿದ್ಧತೆಗಳ ಬಗ್ಗೆ ತಾಲೂಕು ಅಧ್ಯಕ್ಷರ, ಮುಖಂಡರ ಹಾಗೂ ಮಾಜಿ ಶಾಸಕರ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು.
ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಎಲ್ಲರೂ ಶ್ರಮಿಸಬೇಕಾಗಿದೆ. ಹಾಗಾಗಿ ಪ್ರತಿಯೊಬ್ಬರು ಯಾವುದೇ ಮೈಮನಸ್ಸುಗಳನ್ನು ಇಟ್ಟುಕೊಳ್ಳದೇ ಚುನಾವಣೆಗಾಗಿ ಶ್ರಮಿಸಬೇಕು ಎಂದು ಜಿಲ್ಲಾಧ್ಯಕ್ಷರು ಹೇಳಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹೆಚ್.ಎಸ್. ಸುಂದರೇಶ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಸೇರಿದಂತೆ ಪಕ್ಷದ ತಾಲೂಕು ಅಧ್ಯಕ್ಷರು, ಮುಖಂಡರು ಉಪಸ್ಥಿತರಿದ್ದರು.