ಶಿವಮೊಗ್ಗ: ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಫ್ ಡೇ ಲಾಕ್ ಡೌನ್ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಮಾಡಿದೆ.
ಹಾಗಾಗಿ ಅನಗತ್ಯವಾಗಿ ಓಡಾಡುತ್ತಿದ್ದ ಸವಾರರ ವಾಹನಗಳನ್ನು ಪೊಲೀಸರು ಸೀಜ್ ಮಾಡಿ ದಂಡ ಹಾಕಿ ವಾರ್ನಿಂಗ್ ನೀಡಿದ್ದಾರೆ. ಕಾರಣ ಇಲ್ಲದೆ ಸಂಚರಿಸುತ್ತಿದ್ದ ಇಪ್ಪತ್ತಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದುಕೊಂಡು ದಂಡ ವಿಧಿಸಲಾಗಿದೆ. ಮಾಸ್ಕ್ ಹಾಕಿಕೊಳ್ಳದ ವಾಹನ ಸವಾರರಿಗೆ ಮಾಸ್ಕ್ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು.
ನಗರದ ಆಲ್ಕೋಲಾ ಸರ್ಕಲ್ನಲ್ಲಿ ಸಂಜೆ ಐದು ಗಂಟೆಯಾದರೂ ಜಿಲ್ಲಾಡಳಿತದ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಓಡಾಡುತ್ತಿದ್ದವರ ವಾಹನಗಳನ್ನು ವಶಕ್ಕೆ ಪಡೆಯುವ ಮೂಲಕ ಪೊಲೀಸರು ಸವಾರರಿಗೆ ಶಾಕ್ ನೀಡಿದರು.