ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ(ಸಿಆರ್‌ಪಿಸಿ ಸೆಕ್ಷನ್ 144) ಜಾರಿಗೊಳಿಸಲಾಗಿದೆ. ನಿನ್ನೆವರೆಗೂ ಬೂದಿ ಮುಚ್ಚಿದ ಕೆಂಡವಾಗಿದ್ದ ಶಿವಮೊಗ್ಗ ನಗರವೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಪೊಲೀಸ್ ಬಿಗಿ ಬಂದೋಬಸ್ತ್ ಜಾರಿ ಮಾಡಲಾಗಿದೆ. ನಗರದ ಪ್ರಮುಖ ವೃತ್ತ ಸೇರಿದಂತೆ, ಪ್ರಮುಖ ಬೀದಿಗಳಲ್ಲಿ, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಿ ಶಾಂತಿ, ಸುವ್ಯವಸ್ಥೆ ಕಾಪಾಡಲಾಗುತ್ತಿದೆ.
ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 9 ಗಂಟೆಯವರೆಗೂ ಅವಕಾಶ ನೀಡಲಾಗಿದೆ. ನಂತರ ಅನಗತ್ಯ ಸವಾರರಿಗೆ ಬ್ರೇಕ್ ಹಾಕಿ ನಗರದಲ್ಲಿ ಶಾಂತಿ ಕಾಪಾಡಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ಕೊಲೆ ಪ್ರಕರಣ.. ಪೊಲೀಸ್ ತನಿಖೆಯ ಮಾಹಿತಿ ಆಧರಿಸಿ ಬೇರೆ ಸಂಸ್ಥೆಗೆ ವಹಿಸಿವ ನಿರ್ಧಾರ : ಸಿಎಂ
ಹರ್ಷನ ಹತ್ಯೆ ನಂತರ ಶಿವಮೊಗ್ಗ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾತ್ತು. ಹಂತ ಹಂತವಾಗಿ ನಗರ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಕರ್ಫ್ಯೂ ನಡುವೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.