ETV Bharat / city

ಶಿವಮೊಗ್ಗ ಕೊಲೆ ಪ್ರಕರಣ: ಅಪ್ರಾಪ್ತ ಸೇರಿ ಇಬ್ಬರ ಬಂಧನ

ಶಿವಮೊಗ್ಗದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನ ಗುಡಿಯ ದ್ವಜದ ಕಂಬದ ಹತ್ತಿರ, ನ.9ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಒರ್ವ ಅಪ್ರಾಪ್ತ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೆ ಹಳೆ ದ್ವೇಷ ಕಾರಣ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು ರವರು ತಿಳಿಸಿದ್ದಾರೆ.

shivamogga-jayanagar-police-arrested-two-accused-in-murder
ಶಿವಮೊಗ್ಗ ಕೊಲೆ ಪ್ರಕರಣ
author img

By

Published : Nov 12, 2020, 10:41 PM IST

ಶಿವಮೊಗ್ಗ : ನ.9ರಂದು ನಗರದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಯುಧಗಳು ಹಾಗೂ ಒಂದು ದ್ವಿಚಕ್ರವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನ ಗುಡಿಯ ಧ್ವಜದ ಕಂಬದ ಹತ್ತಿರ, ನ.9ರಂದು ಮಂಜುನಾಥ ಭಂಡಾರಿ (32) ಎಂಬಾತನ ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಳೆಯ ದ್ವೇಷದ ಹಿನ್ನೆಲೆ ಆರೋಪಿ ಭವಿತ್ ಅಲಿಯಾಸ್​​ ಆಕಾಶ್ (23) ಹಾಗೂ ಅಪ್ರಾಪ್ತ ಬಾಲಕ ಸೇರಿ ಕೊಲೆ ಮಾಡಿದ್ದಾರೆ ಎಂದು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ವ್ಯಕ್ತಿ ಮಂಜುನಾಥ ಬಂಡಾರಿ ರೌಡಿ ಶೀಟರ್ ಆಗಿದ್ದು, ಈತ ಆರೋಪಿಗಳಿಗೆ ಹಣವನ್ನು ಕೊಡುವಂತೆ ಕಿರುಕುಳ ನೀಡಿ ನೀಡಿದ್ದರಿಂದ ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ ಶಾಂತರಾಜು ರವರು ತಿಳಿಸಿದ್ದಾರೆ.

ಉಮೇಶ್ ಈಶ್ವರ್ ನಾಯಕ್, ಡಿವೈಎಸ್.ಪಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ನ.11 ರಂದು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಆಯುಧ ಹಾಗೂ ಕೃತ್ಯಕ್ಕೆ ಸಂಬಂಧಿಸಿದಂತೆ ಒಂದು ದ್ವಿ ಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.