ಶಿವಮೊಗ್ಗ: 144 ಸೆಕ್ಷನ್ ಜಾರಿ ನಡುವೆ ನಗರದ ಗಾಂಧಿ ಬಜಾರ್ನಲ್ಲಿ ತೆರೆದಿದ್ದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಪೊಲೀಸರು ಮನವಿ ಮಾಡಿದರು ಕೂಡಾ ಸಹಕರಿಸದ ವ್ಯಾಪಾರಿಗಳು ಅಧಿಕಾರಿಗಳೊಂದಿಗೆ ಮಾತಿನ ಚಕಮಕಿಗಿಳಿದ ಘಟನೆ ನಡೆದಿದೆ.
ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಸಹ ವ್ಯಾಪಾರಿಗಳು ಅಂಗಡಿಗಳ ಬಾಗಿಲು ತೆರೆದು ನಿರ್ಭಯವಾಗಿ ವ್ಯಾಪಾರ ವಹಿವಾಟು ನಡೆಸಿದ್ದರು. ಈ ಸಂದರ್ಭದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಅಧಿಕಾರಿಗಳು ಕೇಳಿಕೊಂಡರೆ ಅಧಿಕಾರಿಗಳ ಜೊತೆ ಮಳಿಗೆ ಮಾಲೀಕರು ಮಾತಿನ ಚಕಮಕಿ ನಡೆಸಿದರು. ನಂತರ ಜನರನ್ನು ಚದುರಿಸಲು ಅನಿವಾರ್ಯವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು.