ಶಿವಮೊಗ್ಗ: ಬಹುಮತವಿಲ್ಲದೇ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದು ಖಂಡನೀಯ ಎಂದು ಶಿವಮೊಗ್ಗ ನಗರ ವಿಧಾನಸಭಾ ಯುವ ಕಾಂಗ್ರೆಸ್ ಕಾರ್ಯಕರ್ತರು ಗಾಂಧಿ ಪಾರ್ಕ್ನಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದ್ರು.
ಬಿಜೆಪಿಗೆ ಬಹುಮತ ಇಲ್ಲದೇ ಇದ್ದರೂ ರಾಜ್ಯಪಾಲರು ಯಡಿಯೂರಪ್ಪ ಅವರಿಗೆ ಸರ್ಕಾರ ರಚನೆಗೆ ಅವಕಾಶ ನೀಡಿ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಈ ಮೂಲಕ ಸಂವಿಧಾನ ಕೊಲೆ ಮಾಡಲು ಹೊರಟಿದ್ದಾರೆ. ಅಧಿಕಾರದ ಆಸೆಗೆ ಶಾಸಕರ ಕುದುರೆ ವ್ಯಾಪಾರ ನಡೆಸಿದ್ದಾರೆ. ಕುದುರೆ ವ್ಯಾಪಾರ ನಡೆಸಲು ಬಿಜೆಪಿಯು ಭ್ರಷ್ಟಚಾರದ ಹಣ ಬಳಸಿದೆ. ರಾಜ್ಯದಲ್ಲಿ ಸಿಎಂ ಆಗಿ ಬಿಎಸ್ವೈ ಅಧಿಕಾರ ಸ್ವೀಕಾರ ಮಾಡಿದ್ದು, ಕಾನೂನು ಬಾಹಿರವಾಗಿದೆ. ಇದರಿಂದ ರಾಷ್ಟ್ರಪತಿ ಅವರು ತಕ್ಷಣ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ನ ನಗರಾಧ್ಯಕ್ಷ ಗಿರೀಶ್, ಜಿಲ್ಲಾ ಕಾಂಗ್ರೆಸ್ನ ರಂಗನಾಥ್ ಸೇರಿ ಹಲವು ಕಾರ್ಯಕರ್ತರು ಹಾಜರಿದ್ದರು.