ಶಿವಮೊಗ್ಗ: ಶಿವಮೊಗ್ಗದ ಉಪ ವಿಭಾಗಾಧಿಕಾರಿ ಟಿ.ಎ. ಪ್ರಕಾಶ್ ಎಂಬವರ ಪತ್ನಿ ಸುಮಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಿವಮೊಗ್ಗದ ನಿಸರ್ಗ ಬಡಾವಣೆಯ ತಮ್ಮ ನಿವಾಸದಲ್ಲಿ ನಿನ್ನೆ ಸಂಜೆ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕಾಶ್ ಮನೆಗೆ ಹೋದಾಗ ಪ್ರಕರಣ ಗೊತ್ತಾಗಿದ್ದು, ತಕ್ಷಣ ಸುಮಾ ಅವರನ್ನು ನಂಜಪ್ಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಈ ವೇಳೆಗಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.
ಸುಮಾ ಅವರು ಶಿವಮೊಗ್ಗದ ಸರ್ಕಾರಿ ಬಾಲಕಿಯ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ದಂಪತಿಗಳಿಗೆ ಮಕ್ಕಳಾಗಿರಲಿಲ್ಲ. ಸುಮಾ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.