ETV Bharat / city

ಶಿವಮೊಗ್ಗ ಸ್ಮಾರ್ಟ್​ ಸಿಟಿ ಕಾಮಗಾರಿ: 2023ರ ಮಾರ್ಚ್ ಒಳಗೆ ಪೂರ್ಣ - ಸ್ಮಾರ್ಟ್ ಸಿಟಿ ಕಾಮಗಾರಿ

2023 ಮಾರ್ಚ್​ವರೆಗೆ ಸ್ಮಾರ್ಟ್​ ಸಿಟಿ ಯೋಜನೆ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ. ಶಿವಮೊಗ್ಗ ನಗರದ ಯೋಜನೆ ಡಿಸೆಂಬರ್​ ಒಳಗೆ ಬಹುತೇಕ ಪೂರ್ಣವಾಗಲಿದೆ ಎಂದು ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

smart city project will finish in this December
ಚಿದಾನಂದ ವಠಾರೆ
author img

By

Published : Apr 1, 2022, 7:58 PM IST

ಶಿವಮೊಗ್ಗ: ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಲ್ಲ ಕಾಮಗಾರಿಗಳು 2023 ರ ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಬಹುತೇಕ ಎಲ್ಲ ಕಾಮಗಾರಿಗಳು ಈ ವರ್ಷದ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಠಾರೆ ತಿಳಿಸಿದ್ದಾರೆ.

ಇಂದು ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಯ ಅವಧಿಯನ್ನು ಮುಂದಿನ ವರ್ಷದ ಜೂನ್ ವರೆಗೂ ವಿಸ್ತರಿಸಿದೆ. ಒಂದೆರಡು ಕಾಮಗಾರಿಗಳು ಮುಂದಿನ ವರ್ಷ ಪೂರ್ಣಗೊಳ್ಳಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಇದುವರೆಗೂ 758 ಕೋಟಿ ರೂ ಬಿಡುಗಡೆಯಾಗಿದೆ. ಇದುವರೆಗೂ 541 ಕೋಟಿ ರೂ ವೆಚ್ಚವಾಗಿದೆ. ಇದುವರೆಗೂ ಯಾವುದೇ ಲೋಪವಾಗದಂತೆ ಕಾಮಗಾರಿ ನಡೆಸಲಾಗಿದೆ ಎಂದರು.

ಶಿವಮೊಗ್ಗ ಸ್ಮಾರ್ಟ್​ ಸಿಟಿ ಕಾಮಗಾರಿ: 2023ರ ಮಾರ್ಚ್ ಒಳಗೆ ಪೂರ್ಣ

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ 19 ನೇ ಸ್ಥಾನ: ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಯು ದೇಶದಲ್ಲಿ 19 ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದೆ. ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಒಟ್ಟು ₹ 997 ಕೋಟಿ ಅಂದಾಜಿನಲ್ಲಿ 60 ಕಾಮಗಾರಿ ಕೈಗೊಳ್ಳಲಾಗಿದ್ದು, 31 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿದೆ. ಇದರಲ್ಲಿ ಶೇ. 67 ರಷ್ಟು ಭೌತಿಕ ಹಾಗೂ ಶೇ. 54 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರ ಅಹವಾಲು ಸ್ವೀಕರಿಸಲು ವ್ಯವಸ್ಥೆ: ಸಾರ್ವಜನಿಕರ ಅಹವಾಲು ಮತ್ತು ಕುಂದುಕೊರತೆ ನಿವಾರಣೆ ವ್ಯವಸ್ಥೆ ಕಲ್ಪಿಸಲಾಗಿದೆ. ದೂರವಾಣಿ, ಇಮೇಲ್ ಹಾಗೂ ವಾಟ್ಸ್​ಆ್ಯಪ್​ ಸೇರಿದಂತೆ ಎಲ್ಲ ಮೂಲಗಳಿಂದ ಬರುವ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಕನ್ಸರ್ವೆನ್ಸಿಗಳನ್ನು ಅದಷ್ಟು ಬೇಗನೆ ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡಲಾಗುವುದು ಎಂದರು. ಇನ್ನು ಉಳಿದಿರುವ ಕುವೆಂಪು ರಸ್ತೆಯ ಕಾಮಗಾರಿಯನ್ನು ಈ ತಿಂಗಳ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದರು.

ಇದನ್ನೂ ಓದಿ: ಹಲಾಲ್ ವಿರುದ್ಧ ಕ್ಯಾಂಪೇನ್.. ಕೆರೆಹಳ್ಳಿ, ಸಂಬರ್ಗಿ, ಕಾಳಿಸ್ವಾಮಿ ವಿರುದ್ಧ ಕಮಿಷನರ್ ಪಂತ್‌​ಗೆ ವಕೀಲರ ನಿಯೋಗದಿಂದ ದೂರು..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.