ಶಿವಮೊಗ್ಗ: ಜಿಲ್ಲೆಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ನಾಗರಿಕರ ವ್ಯಾಜ್ಯಗಳು ಹೆಚ್ಚಾಗಿ ಕಂಡು ಬರುತ್ತಿವೆ. ಆದರೆ, ಪೊಲೀಸ್ ಇಲಾಖೆಯಲ್ಲಿ ಅವುಗಳನ್ನು ಬಗೆಹರಿಸಲು ಅವಕಾಶ ಇಲ್ಲ ಎಂಬುದನ್ನು ಸಾರ್ವಜನಿಕರು ಅರಿತುಕೊಳ್ಳಬೇಕು ಎಂದು ನೂತನ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ.ಎಂ.ಶಾಂತರಾಜು ತಿಳಿಸಿದರು.
ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಚೆಗೆ ಸೈಬರ್ ಅಪರಾಧ ಪ್ರಕರಣ ದುಪ್ಪಟ್ಟಾಗುತ್ತಿವೆ. ಜನರು ಆನ್ಲೈನ್ ಕರೆ ಹಾಗೂ ಆಮಿಷಗಳಿಗೆ ಬಲಿಯಾಗಿ ಹಣ ಕಳೆದುಕೊಳ್ಳಬಾರದು ಎಂದು ಸಲಹೆ ನೀಡಿದರು.
ಜಿಲ್ಲೆಯ ಸಂಚಾರ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ಆಗಬೇಕಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಮೊದಲ ಕರ್ತವ್ಯ. ಹಾಗಾಗಿ ಗಣಪತಿ ಹಬ್ಬದ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಿ ಯಾವುದೇ ರೀತಿಯ ಅವಘಡ ಸಂಭವಿಸಿದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.