ಶಿವಮೊಗ್ಗ: ಸಿಎಂ ಯಡಿಯೂರಪ್ಪನವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಇಂದು ನಡೆದ ಬಜೆಟ್ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಶಸ್ತ್ರ ಚಿಕಿತ್ಸೆಗೆ ನಗದು ರಹಿತ ಯೋಜನೆ ಘೋಷಣೆ ಮಾಡಿದ್ದು. ಇದು ಸರ್ಕಾರಿ ನೌಕರರಿಗೆ ಸಾಕಷ್ಟು ಅನುಕೂಲವಾಗಿದೆ.
ಈ ಬೇಡಿಕೆಯನ್ನು ಸರ್ಕಾರಿ ನೌಕರರು ಹಿಂದೆ ಸಲ್ಲಿಕೆ ಮಾಡಿದ್ದರೂ ಸಹ ಯಾರೂ ಕೂಡ ಯೋಜನೆ ಜಾರಿ ಮಾಡಿರಲಿಲ್ಲ. ಇಂದು ಈ ಯೋಜನೆಯನ್ನು ಜಾರಿ ಮಾಡಿದ ಕಾರಣ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿಗಳಿಗೆ ಬೆಂಗಳೂರಿನ ನಿವಾಸದ ಬಳಿ ಸನ್ಮಾನಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಸಿಎಂಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ರಾಜ್ಯ ಸಂಘದ ಪದಾಧಿಕಾರಿಗಳು ಹಾಜರಿದ್ದರು.