ಶಿವಮೊಗ್ಗ : ಫಿಲ್ಟರ್ ಇದೆ, ಆದರೆ ಅದರಲ್ಲಿ ಶುದ್ಧವಾದ ನೀರು ಬರುತ್ತಿಲ್ಲ, ಶೌಚಾಲಯ ಇದೆ, ಅದನ್ನು ಸ್ವಚ್ಛ ಮಾಡೋದಕ್ಕೆ ಯಾರು ಬರುತ್ತಿಲ್ಲ. ಅಡುಗೆ ಕೋಣೆ ಇದ್ದರೂ ಅಲ್ಲಿ ಸ್ವಚ್ಛವಾಗಿಲ್ಲ ಎಂದು ಆರೋಪಿಸಿ ಕಾಲೇಜಿನ ಎದುರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
ಕಾಲೇಜು ಹಾಸ್ಟೆಲ್ ನಲ್ಲಿ ಮೂಲಭೂತ ಸೌಲಭ್ಯದ ಕೊರತೆ ಬಗ್ಗೆ ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದು, ಕಾಲೇಜ್ ಹಾಸ್ಟೆಲ್‌ನಲ್ಲಿನ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ.
ಪರೀಕ್ಷಾ ಸಮಯ ಹತ್ತಿರ ಬರುತ್ತಿದೆ. ಇಂತಹ ಸಮಯದಲ್ಲಿ ಹಾಸ್ಟೆಲ್‌ನಲ್ಲಿ ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳು ಅವಶ್ಯಕವಾಗಿದೆ. ಇದನ್ನು ಪೂರೈಸುವ ನಿಟ್ಟಿನಲ್ಲಿ ಕಾಲೇಜು ಗಮನಹರಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದು, ಜೊತೆಗೆ ಪ್ರಾಂಶುಪಾಲರಿಗೆ ಮನವಿಯನ್ನೂ ಸಲ್ಲಿಸಿದ್ದಾರೆ.
ಹಾಸ್ಟೆಲಿನ ಒಂದು ಕೊಠಡಿಯಲ್ಲಿ ೧೧ ಜನ ವಿದ್ಯಾರ್ಥಿನಿಯರು ಇರುವಂತೆ ಸೂಚಿಸಲಾಗಿದ್ದು, ಕಳೆದ ಕೆಲ ದಿನಗಳಿಂದ ಹಲವು ವಿದ್ಯಾರ್ಥಿನಿಯರು ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಹಾಸ್ಟೆಲ್‌ನಲ್ಲಿರುವ ಸ್ವಚ್ಛತೆಯ ಕೊರತೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ. ಈ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದಾರೆ. ಪ್ರತಿಭಟನೆಗೆ ವಿದ್ಯಾರ್ಥಿ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಓದಿ : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ: ನಾಳೆ ಹೈಕೋರ್ಟ್ನಿಂದ ಅಂತಿಮ ತೀರ್ಪು