ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ ಕಮಲಾ ನೆಹರೂ ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಎರಡನೇ ಉಪನ್ಯಾಸ ಮಾಲಿಕೆಯ ಭಾಗವಾಗಿ 'ಮಹಿಳಾ ಸಬಲೀಕರಣ-ಏಕೆ?, ಹೇಗೆ? ಎಂಬ ವಿಷಯದ ಕುರಿತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಥಮ ಉಪನ್ಯಾಸ ಮಾಲಿಕೆಯನ್ನು ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ನಡೆಸಿಕೊಟ್ಟಿದ್ದರು. ಮಹಿಳಾ ಸಬಲೀಕರಣ,ಅಭಿವೃದ್ಧಿ, ಜೀವನದ ಆಗು - ಹೋಗುಗಳ ಕುರಿತು ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿನಿಯರು ಉತ್ತರ ಪಡೆದರು.
ಸಂವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಬಿ.ಎಸ್.ನಾರಾಯಣ್ ರಾವ್ ವಹಿಸಿದ್ದರು. ಈ ವೇಳೆ ಸಿ.ಆರ್.ನಾಗರಾಜ್, ನಾರಾಯಣ್, ಎಸ್.ಎನ್.ನಾಗರಾಜ್ ರಮೇಶ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ವಿದ್ಯಾರ್ಥಿ ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್