ETV Bharat / city

ಈಶ್ವರಪ್ಪ ಮನೆಗೆ ಭೇಟಿ ನೀಡಿ ಆಶೀರ್ವಾದ ಮಾಡಿದ ಸ್ವಾಮೀಜಿಗಳು - swamiji visited k s eshwarappa house

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ವಿವಿಧ ಸ್ವಾಮೀಜಿಗಳು ಇಂದು ಭೇಟಿ ನೀಡಿ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ.

swamiji's visited k s eshwarappa house
ಮಾಜಿ ಸಚಿವ ಈಶ್ವರಪ್ಪ ಮನೆಗೆ ಭೇಟಿ ನೀಡಿದ ಸ್ವಾಮೀಜಿಗಳು
author img

By

Published : Apr 17, 2022, 10:24 PM IST

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್.ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ‌ಈ ಹಿನ್ನೆಲೆ‌ಯಲ್ಲಿ ಇಂದು ಅವರ ನಿವಾಸಕ್ಕೆ ವಿವಿಧ ಸ್ವಾಮೀಜಿಗಳು ಭೇಟಿ ನೀಡಿ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಮನೆಯಲ್ಲಿ ವಿಶೇಷ ಪೂಜೆ ಕೂಡ ನಡೆಸಿದ್ದಾರೆ.

ಶನಿವಾರದಂದು ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆಯ ನಿರಂಜನಾಂದಪುರಿ ಸ್ವಾಮೀಜಿ, ಪುರುಷೋತ್ತಮನಂದಪುರಿ ಸ್ವಾಮೀಜಿ, ಹೊಸದುರ್ಗದ ಈಶ್ವರಾನಂದಪುರಿ ಸ್ವಾಮೀಜಿ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ನೀಡಿ ಈಶ್ವರಪ್ಪರ ಜೊತೆ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: ಮಾಜಿ ಸಚಿವ ಈಶ್ವರಪ್ಪ ನಿವಾಸಕ್ಕೆ ವಿವಿಧ ಮಠಾಧೀಶರು ಭೇಟಿ

ಇಂದು ಸಹ ಈಶ್ವರಪ್ಪ ಅವರ ಮನೆಗೆ ಕೇದಾರ ಪೀಠದ ಜಗದ್ಗುರು ಭೀಮಾಶಂಕರ ಲಿಂಗಾ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ 8ಕ್ಕೂ ಹೆಚ್ಚು ಸ್ವಾಮೀಜಿಗಳು ಭೇಟಿ ನೀಡಿ, ಆಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಈಶ್ವರಪ್ಪ ಕುಟುಂಬಸ್ಥರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.