ಶಿವಮೊಗ್ಗ: ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗ ಸೌಂದರ್ಯವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವೀಕ್ಷಿಸಿ, ಸಂತಸಪಟ್ಟರು.
ನವೆಂಬರ್ 24ರಂದು (ನಿನ್ನೆ) ರಾತ್ರಿ ಜೋಗದಲ್ಲಿ ವಾಸ್ತವ್ಯ ಹೂಡಿದ ಅವರು, ಇಂದು ಮುಂಜಾನೆಯೇ ಜೋಗದ ರಾಜಾ, ರಾಣಿ, ರೋರರ್, ರಾಕೆಟ್ ಜಲಧಾರೆ ವೀಕ್ಷಿಸಿ ಮಾಹಿತಿ ಪಡೆದರು.
ನಿನ್ನೆ ಸಹ ತಾವರೆಕೊಪ್ಪ ಸಿಂಹಧಾಮಕ್ಕೆ ಭೇಟಿ ನೀಡಿದ ರಾಜ್ಯಪಾಲರು, ಸಿಂಹಧಾಮದ ಕುರಿತು ಮಾಹಿತಿ ಪಡೆದುಕೊಂಡಿದ್ದರು. ಒಟ್ಟಾರೆ ಎರಡು ದಿನಗಳ ಪ್ರವಾಸದಲ್ಲಿರುವ ರಾಜ್ಯದ ಪ್ರಥಮ ಪ್ರಜೆ, ಶಿವಮೊಗ್ಗ ಜಿಲ್ಲೆಯ ಪ್ರವಾಸಿತಾಣಗಳನ್ನು ವೀಕ್ಷಿಸುವ ಜೊತೆ ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತಿದ್ದಾರೆ.
ಇದನ್ನೂ ಓದಿ: ಶಿಕ್ಷಣ ತಜ್ಞರ ಅನುಭವದ ಆಧಾರದ ಮೇಲೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ.. ರಾಜ್ಯಪಾಲ ಗೆಹ್ಲೋಟ್