ಶಿವಮೊಗ್ಗ: ನನ್ನ ಪ್ರಕಾರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಬೊಮ್ಮಾಯಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅಮಿತ್ ಷಾ ಅವರು ಇಂದು ಸಂಜೆ ಬೆಂಗಳೂರಿಗೆ ಬರ್ತಿದ್ದಾರೆ. ನಾನೂ ಅವರನ್ನು ಭೇಟಿ ಮಾಡುತ್ತೇನೆ. ಚುನಾವಣೆ ವರ್ಷ ಆಗಿರುವುದರಿಂದ ರಾಜ್ಯದ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳಲು ಬರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಹೆಚ್ಚು ಗಮನವನ್ನು ಕರ್ನಾಟಕದ ಮೇಲೆ ಹರಿಸಲಿದ್ದಾರೆ.
150 ಸ್ಥಾನಗಳ ಗುರಿ ಮುಟ್ಟಲು ಅವರು ಸಲಹೆಗಳನ್ನು ನೀಡಲಿದ್ದಾರೆ. ಅವರ ಜೊತೆ ಸಮಾಲೋಚನೆ ಮಾಡುತ್ತೇನೆ. ಹಾಲಿ ಶಾಸಕರುಗಳಿಗೆ ಟಿಕೆಟ್ ನೀಡುವ ವಿಚಾರ ಕೇಂದ್ರದ ನಾಯಕರ ಜವಾಬ್ದಾರಿ. ಅದನ್ನು ಅವರೇ ನೋಡಿಕೊಳ್ಳುತ್ತಾರೆ ಎಂದರು.
ಇದನ್ನೂ ಓದಿ: ಕುಟುಂಬ ರಾಜಕಾರಣ ಎಲ್ಲಾ ಪಕ್ಷಗಳಲ್ಲೂ ಏಡ್ಸ್ ರೋಗದಂತೆ ಹಬ್ಬಿದೆ: ಯತ್ನಾಳ್