ETV Bharat / city

ಅಡಿಕೆ ಕಳ್ಳತನ ಪ್ರಕರಣ: ಮೂವರ ಬಂಧನ - ಭದ್ರಾವತಿ ಡಿವೈಎಸ್​ಪಿ ಕೃಷ್ಣಮೂರ್ತಿ

ಅಡಿಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಬಂಧಿಸಿ, 8.80 ಲಕ್ಷ ರೂ. ಮೌಲ್ಯದ ಅಡಿಕೆ ಹಾಗೂ 1.25 ಲಕ್ಷ ರೂ. ಮೌಲ್ಯದ 3 ದ್ವಿಚಕ್ರ ವಾಹನಗಳನ್ನು ಹೊಳೆಹೂನ್ನೂರು ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

arrest
arrest
author img

By

Published : Feb 27, 2021, 11:48 AM IST

ಶಿವಮೊಗ್ಗ: ಅಡಿಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರನ್ನು ಹೊಳೆಹೂನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿ ನಿವಾಸಿಗಳಾದ ಪ್ರತಾಪ (21), ರಾಜೇಶ್ (24) ಹಾಗೂ ಚನ್ನಗಿರಿಯ ರೇವಣಸಿದ್ದಪ್ಪ (27) ಬಂಧಿತರು. ಇವರು ಹೊಳೆಹೂನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಅಡಿಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಬಂಧಿತರಿಂದ 22 ಕ್ವಿಂಟಾಲ್ ತೂಕದ 8.80 ಲಕ್ಷ ರೂ. ಮೌಲ್ಯದ ಅಡಿಕೆ ಹಾಗೂ 1.25 ಲಕ್ಷ ರೂ. ಮೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಭದ್ರಾವತಿ ಡಿವೈಎಸ್​ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಹೊಳೆಹೂನ್ನೂರು ಪಿಎಸ್ಐ ಸುರೇಶ್ ಹಾಗೂ ಸಿಬ್ಬಂದಿ ಕೃಷ್ಣಮೂರ್ತಿ ಅವರ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.