ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಇಬ್ಬರು ವಿದ್ಯಾರ್ಥಿಗಳು ಹಾಗೂ ಆರೋಗ್ಯ ಸಮಸ್ಯೆ ಇರುವ 6 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದಾರೆ ಎಂದು ಡಿಡಿಪಿಐ ಎನ್.ಎಂ.ರಮೇಶ್ ತಿಳಿಸಿದ್ದಾರೆ.
ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಗಣಿತ, ವಿಜ್ಞಾನ ಮತ್ತು ಸಮಾಜ - ವಿಜ್ಞಾನ ವಿಷಯಗಳಿಗೆ 150 ಕೇಂದ್ರಗಳಲ್ಲಿ ನಡೆದ ಬಹು ಆಯ್ಕೆ ಮಾದರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಸುಗಮವಾಗಿ ನಡೆದಿದೆ. ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಶೇ. 98.9 ವಿದ್ಯಾರ್ಥಿಗಳು ಹಾಗೂ ಸಮಾಜ - ವಿಜ್ಞಾನ ವಿಷಯದಲ್ಲಿ ಶೇ.99 ವಿದ್ಯಾರ್ಥಿಗಳು ಹಾಜರಾಗಿದ್ದರು.
ಗಣಿತ ವಿಷಯದಲ್ಲಿ ಒಟ್ಟು 24,004 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 23,762 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟು 87 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇನ್ನೂ ವಿಜ್ಞಾನ ವಿಷಯದಲ್ಲಿ 23,774 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 23,536 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ. ಒಟ್ಟು 76 ವಿದ್ಯಾರ್ಥಿಗಳು ಗೈರಾಗಿರುತ್ತಾರೆ. ಸಮಾಜ ವಿಜ್ಞಾನ ವಿಷಯದಲ್ಲಿ 23,097 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 22,879 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 66 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಅನಾರೋಗ್ಯ ಕಾರಣದಿಂದ 6 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದು, ಕೋವಿಡ್ ಪಾಸಿಟಿವ್ ಇದ್ದ ಇಬ್ಬರು ವಿದ್ಯಾರ್ಥಿಗಳು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಮಾಹಿತಿ ನೀಡಿದರು.
ಪರೀಕ್ಷೆ ಬರೆದ ಹಾವು ಕಚ್ಚಿದ ವಿದ್ಯಾರ್ಥಿ
ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ವಿದ್ಯಾರ್ಥಿಯೊಬ್ಬ ಹಾವು ಕಚ್ಚಿ ಗಾಯವಾಗಿದ್ದರೂ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾರೆ ಎಂದರು.
ಇದನ್ನೂ ಓದಿ: ಇಂದು ದ್ವಿತೀಯ PUC ಫಲಿತಾಂಶ ಪ್ರಕಟ.. Result ತಿಳಿಯಲು ಹೀಗೆ ಮಾಡಿ