ETV Bharat / city

ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ವಿ. ಸೋಮಣ್ಣ - Shivmogga floods areas

ಶಿವಮೊಗ್ಗದ ರಾಮಶೆಟ್ಟಿ ಪಾರ್ಕ್​ನ ಗಣಪತಿ ದೇವಸ್ಥಾನದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಬಿಜೆಪಿಯ ಹಿರಿಯ ಮುಖಂಡ ವಿ. ಸೋಮಣ್ಣ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.

ಕಾಳಜಿ ಕೇಂದ್ರಕ್ಕೆ ವಿ. ಸೋಮಣ್ಣ ಭೇಟಿ
author img

By

Published : Aug 11, 2019, 5:15 AM IST

ಶಿವಮೊಗ್ಗ: ರಾಮಶೆಟ್ಟಿ ಪಾರ್ಕ್​ನ ಗಣಪತಿ ದೇವಸ್ಥಾನದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಬಿಜೆಪಿಯ ಹಿರಿಯ ಮುಖಂಡ ವಿ. ಸೋಮಣ್ಣ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.

ಕಾಳಜಿ ಕೇಂದ್ರಕ್ಕೆ ವಿ. ಸೋಮಣ್ಣ ಭೇಟಿ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಪರಿಸ್ಥಿತಿಯನ್ನು ಅವಲೋಕಿಸಿದ್ದೇವೆ. ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡುವ ಕುರಿತಾಗಿ ಚರ್ಚಿಸುತ್ತಿದ್ದೇವೆ. ಈಗಾಗಲೇ ರಾಜ್ಯ ಸರ್ಕಾರ 100 ಕೋಟಿ ಬಿಡುಗಡೆ ಮಾಡಿದ್ದು, ಕೇಂದ್ರ ಸರ್ಕಾರ 128 ಕೋಟಿ ಬಿಡುಗಡೆ ಮಾಡಿದೆ ಎಂದರು.

ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ನಾಳೆ ಕೇಂದ್ರದಿಂದ ಅಮಿತ್ ಶಾ ಅವರು ಬರಲಿದ್ದಾರೆ. ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವೈಮಾನಿಕ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಕೇಂದ್ರದ ನಾಯಕರ ಬಳಿ ವಿಪತ್ತಿನ ಕುರಿತು ಮನವರಿಕೆ ಮಾಡಿ ಕೊಡುತ್ತೇವೆ ಎಂದರು. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿರುವುದರಿಂದ ಜನರು ಭಯ ಪಡುವ ಅಗತ್ಯ ಇಲ್ಲ ಎಂದರು.

Intro:ಶಿವಮೊಗ್ಗ,
ರಾಮಶೆಟ್ಟಿ ಪಾರ್ಕ್ ನ ಗಣಪತಿ ದೇವಸ್ಥಾನದಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿ ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿಯ ಹಿರಿಯ ಮುಖಂಡ ವಿ ಸೋಮಣ್ಣ ಶಿವಮೊಗ್ಗದ ಪರಿಸ್ಥಿತಿಯನ್ನು ಅವಲೋಕಿಸಿದ್ದೇವೆ ಇಂತಹ ಸಮಸ್ಯೆ ಗಳಿಗೆ ಶಾಶ್ವತ ಪರಿಹಾರ ಮಾಡುವ ಕುರಿತಾಗಿ ಚರ್ಚಿಸುತ್ತಿದ್ದೇವೆ ಎಂದರು.

Body:ಈಗಾಗಲೇ ರಾಜ್ಯ ಸರ್ಕಾರ 100 ಕೋಟಿ ಬಿಡುಗಡೆ ಮಾಡಿದ್ದು ಕೇಂದ್ರ ಸರ್ಕಾರ 128 ಕೋಟಿ ಬಿಡುಗಡೆ ಮಾಡಿದೆ ಎಂದರು.
ಇವತ್ತಿನ ವೈಮಾನಿಕ ಸಮೀಕ್ಷೆಯನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಾಡಿದ್ದಾರೆ .
ನಾಳೆ ಕೇಂದ್ರದಿಂದ ಅಮಿತ್ ಶಾ ಅವರು ಬರಲಿದ್ದಾರೆ ಅವರೊಂದಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ವೈಮಾನಿಕ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ .
ಕೇಂದ್ರದ ನಾಯಕರ ಬಳಿ ರಾಷ್ಟ್ರೀಯ ವಿಪತ್ತು ಎಂಬುದರ ಬಗ್ಗೆ ಮನವರಿಕೆ ಮಾಡಿ ಕೊಡುತ್ತೇವೆ ಎಂದರು.
ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿರುವುದರಿಂದ ಜನರು ಭಯ ಪಡುವ ಅಗತ್ಯ ಇಲ್ಲ ಅವರೊಂದಿಗೆ ನಾವಿದ್ದೆವೆ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.