ಶಿವಮೊಗ್ಗ: ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಸಾಗರ ನಗರಸಭೆ, ಶಿಕಾರಿಪುರ ಪುರಸಭೆ, ಶಿರಾಳಕೊಪ್ಪ, ಸೊರಬ ಹಾಗೂ ಹೊಸನಗರ ಪಟ್ಟಣ ಪಂಚಾಯತಿಗಳ ಮತ ಎಣಿಕೆ ಪ್ರಾರಂಭವಾಗಿದೆ.
ಶಿಕಾರಿಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಶಿಕಾರಿಪುರ ಪುರಸಭೆ ಹಾಗೂ ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯ ಮತ ಎಣಿಕೆ ನಡೆಸಲಾಗುತ್ತಿದೆ. ಸಾಗರದ ಉರ್ದು ಪ್ರಾಥಮಿಕ ಶಾಲೆಯಲ್ಲಿ, ಸೊರಬ ಹಾಗೂ ಹೊಸನಗರ ಪಟ್ಟಣ ಪಂಚಾಯತಿಯ ಮತ ಎಣಿಕೆಯು ಆಯಾ ತಾಲೂಕು ಕಚೇರಿಯಲ್ಲಿ ನಡೆಯುತ್ತಿದೆ.
ಮತ ಎಣಿಕೆಗೆ ಇವಿಎಂ ಯಂತ್ರಗಳನ್ನು ಸ್ಟ್ರಾಂಗ್ ರೂಂನಿಂದ ಮತ ಎಣಿಕೆ ಕೇಂದ್ರದತ್ತ ತೆಗೆದುಕೊಂಡು ಹೋಗಲಾಗಿದ್ದು, ಏಜೆಂಟ್ಗಳ ಸಮ್ಮುಖದಲ್ಲಿ ಇವಿಎಂ ಯಂತ್ರಗಳನ್ನು ತೆರೆಯಲಾಯಿತು. ಜಿಲ್ಲೆಯ 94 ವಾರ್ಡ್ಗಳಿಗೆ 299 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ.
ಇನ್ನು ಮತ ಎಣಿಕೆ ಕಾರ್ಯದ ಪ್ರಾರಂಭದಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.