ETV Bharat / city

ಶಿವಮೊಗ್ಗದಲ್ಲಿ ಮಳೆಗೆ ಮನೆ ಗೋಡೆ ಕುಸಿತ: ವೃದ್ಧ ಸಾವು - ಶಿವಮೊಗ್ಗ ಮಳೆ ಲೇಟೆಸ್ಟ್​​ ಸುದ್ದಿ

ಶಿವಮೊಗ್ಗದಲ್ಲಿ ಮಳೆ ಆರ್ಭಟಕ್ಕೆ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದ ಮನೆಯೊಂದರ ಗೋಡೆ ಕುಸಿದು ಬಿದ್ದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ವೃದ್ಧ ಸಾವು
author img

By

Published : Oct 26, 2019, 12:22 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಣಪ್ಪ (67) ಮೃತಪಟ್ಟ ವೃದ್ಧ. ರಾತ್ರಿ ಇಡೀ ಧಾರಾಕಾರ ಮಳೆ ಸುರಿದಿದ್ದು, ಲಕ್ಷ್ಮಣಪ್ಪ, ಮನೆಯಲ್ಲಿ ಮಲಗಿದ್ದ ವೇಳೆ ಬೆಳಗಿನ ಜಾವ ಗೋಡೆ ಕುಸಿದು ಇವರ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್​ ನಾಯ್ಕ ಹಾಗೂ ಭದ್ರಾವತಿ ತಹಶೀಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಳೆಗೆ ಮನೆ ಗೋಡೆ ಕುಸಿತ: ವೃದ್ದ ಸಾವು.

ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯ ಅರ್ಭಟ ಮುಂದುವರೆದಿದ್ದು ಮಳೆಯಿಂದ ಮನೆಯ ಗೋಡೆ ಕುಸಿದು ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದ ಲಕ್ಷ್ಮಣ್(67) ನಿನ್ನೆ ಮನೆಯಲ್ಲಿ ಮಲಗಿದ್ದ ವೇಳೆ ಬೆಳಗ್ಗಿನ ಜಾವ ಗೋಡೆ ಕುಸಿತ ಕಂಡಿದೆ.Body:ಇದರಿಂದ ಲಕ್ಷ್ಮಣಪ್ಪನವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಲಕ್ಷ್ಮಣಪ್ಪ ರನ್ನು ಆಸ್ಪತ್ರೆಗೆ ಕರೆದು ಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.Conclusion:ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ಹಾಗೂ ಭದ್ರಾವತಿ ತಹಶೀಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.