ETV Bharat / city

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ : ಡಿಸಿ ಕೆ ಬಿ ಶಿವಕುಮಾರ್

ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಕಳೆದ ಒಂದು ವಾರದ ಅವಧಿಯಲ್ಲಿ ತಪಾಸಣಾ ಪ್ರಮಾಣ ಹೆಚ್ಚಿಸಲಾಗಿದೆ. ಪ್ರಸ್ತುತ ನಿತ್ಯ 2200 ಮಂದಿಯ ಕೊರೊನಾ ತಪಾಸಣೆ ನಡೆಸಲಾಗುತ್ತಿದೆ. ನೂರರಲ್ಲಿ 1.1ರಷ್ಟು ಪಾಸಿಟಿವ್ ಪ್ರಕರಣ ದಾಖಲಾಗುತ್ತಿವೆ..

author img

By

Published : Apr 2, 2021, 6:08 PM IST

we-will-take-strict-action-to-fallow-covid-guidelines
ಡಿಸಿ ಕೆಬಿಶಿವಕುಮಾರ್

ಶಿವಮೊಗ್ಗ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಳೆದ ಒಂದು ವಾರದ ಅವಧಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಸೇರಿ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಮಾರುಕಟ್ಟೆ, ವಾಣಿಜ್ಯ ಸಂಕೀರ್ಣಗಳು, ಕಲ್ಯಾಣ ಮಂಟಪಗಳು, ಸಂತೆಯಂತಹ ಕಡೆಗಳಲ್ಲಿ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲು ಆರಂಭಿಸಲಾಗಿದೆ.

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದ ಗ್ರಾಹಕರೊಂದಿಗೆ ವ್ಯವಹರಿಸದೆ ಮಾಸ್ಕ್ ಧರಿಸುವಂತೆ ಒತ್ತಾಯಿಸಬೇಕು ಎಂದು ವ್ಯಾಪಾರಿಗಳಿಗೆ ಅವರು ಹೇಳಿದರು.

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಜಿಲ್ಲಾಡಳಿತ ಕ್ರಮ..

ಕೋವಿಡ್ ಮಾರ್ಗಸೂಚಿ ಪಾಲಿಸಿ ಕಾರ್ಯಕ್ರಮಗಳನ್ನು ನಡೆಸುವ ಭರವಸೆಯೊಂದಿಗೆ ಸಾರ್ವಜನಿಕ ಸಮಾರಂಭಗಳನ್ನು ಆಯೋಜಿಸಿ, ಬಳಿಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಲವು ಪ್ರಕರಣಗಳಲ್ಲಿ ಕಾನೂನು ಕ್ರಮಕೈಗೊಳ್ಳಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಒಟ್ಟು 1016 ಉಲ್ಲಂಘನೆ ಪ್ರಕರಣಗಳಲ್ಲಿ 1.63ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ಹೇಳಿದರು.

ಗಾಬರಿ ಅಗತ್ಯವಿಲ್ಲ : ಜಿಲ್ಲೆಯಲ್ಲಿ ಕೋವಿಡ್ ಸಂಪೂರ್ಣ ನಿಯಂತ್ರಣದಲ್ಲಿದೆ. ಕಳೆದ ಒಂದು ವಾರದ ಅವಧಿಯಲ್ಲಿ ತಪಾಸಣಾ ಪ್ರಮಾಣ ಹೆಚ್ಚಿಸಲಾಗಿದೆ. ಪ್ರಸ್ತುತ ನಿತ್ಯ 2200 ಮಂದಿಯ ಕೊರೊನಾ ತಪಾಸಣೆ ನಡೆಸಲಾಗುತ್ತಿದೆ. ನೂರರಲ್ಲಿ 1.1ರಷ್ಟು ಪಾಸಿಟಿವ್ ಪ್ರಕರಣ ದಾಖಲಾಗುತ್ತಿವೆ ಎಂದರು.

ಮೂಲಸೌಕರ್ಯ ಮೇಲ್ದರ್ಜೆಗೆ : ಪ್ರಸ್ತುತು ಕೋವಿಡ್ ಪ್ರಕರಣಗಳನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸುಸಜ್ಜಿತ ಐಸಿಯು, 11 ಸಾವಿರ ಕೆಎಲ್ ಆ್ಯಕ್ಸಿಜನ್ ಘಟಕ ಮಾತ್ರವಲ್ಲದೆ ಹೆಚ್ಚುವರಿ 6 ಸಾವಿರ ಕೆಎಲ್ ಘಟಕವನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಎಪಿಎಂಸಿಯಂತಹ ಸ್ಥಳಗಳಲ್ಲಿ ರ್ಯಾಂಡಮ್ ಟೆಸ್ಟ್​​ ನಡೆಸಲಾಗುತ್ತಿದೆ ಎಂದರು.

ಕೋವಿಡ್ ಲಸಿಕೆ ಕಾರ್ಯಕ್ರಮ : ಜಿಲ್ಲೆಯಲ್ಲಿ ಈವರೆಗೆ 18041 (ಶೇ.85) ಆರೋಗ್ಯ ಕಾರ್ಯಕರ್ತೆಯರಿಗೆ ಪ್ರಥಮ ಡೋಸ್ ಹಾಗೂ ಶೇ.53ರಷ್ಟು ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. ಶೇ.63ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್, 60ವರ್ಷ ಮೇಲ್ಪಟ್ಟ 58814 ಮಂದಿಗೆ ಹಾಗೂ 45ವರ್ಷ ಮೇಲ್ಪಟ್ಟ 1470 ಮಂದಿಗೆ ಲಸಿಕೆ ನೀಡಲಾಗಿದೆ. ಜಿಲ್ಲೆಗೆ 11560 ಕೋವ್ಯಾಕ್ಸಿನ್ ಸರಬರಾಜಾಗಿದ್ದು, 4200 ಖರ್ಚಾಗಿದೆ. 128000 ಕೋವಿಶೀಲ್ಡ್ ಸರಬರಾಜಗಿದ್ದು 91904 ಬಳಕೆಯಾಗಿದೆ.

ಒಟ್ಟು 173 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಉಪಕೇಂದ್ರಗಳು, ಪಿಹೆಚ್‌ಸಿ, ಸಿಹೆಚ್‌ಸಿ, ತಾಲೂಕು ಆಸ್ಪತ್ರೆ, ಶಿಮ್ಸ್, ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಹಾಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ತಮ್ಮ ಗುರುತಿನ ಚೀಟಿಯೊಂದಿಗೆ ತೆರಳಿ ಲಸಿಕೆ ಪಡೆಯುವಂತೆ ಅವರು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಎಂ ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ ಎಲ್ ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ ಅನುರಾಧ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.