ETV Bharat / city

ಮಲೆನಾಡು ಭಾಗದಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ: ಸಂಕಷ್ಟದಲ್ಲಿ ಅನ್ನದಾತರು

author img

By

Published : Feb 5, 2022, 8:51 AM IST

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಹಾಗೂ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಚನ್ನಳ್ಳಿ ಗ್ರಾಮ, ಆನೆಸರ, ಮಂಜರಿಕೊಪ್ಪ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಮಲೆನಾಡು ಭಾಗದಲ್ಲಿ ಮಿತಿಮೀರಿದ ಕಾಡಾನೆ ಹಾವಳಿ
ಮಲೆನಾಡು ಭಾಗದಲ್ಲಿ ಮಿತಿಮೀರಿದ ಕಾಡಾನೆ ಹಾವಳಿ

ಚಿಕ್ಕಮಗಳೂರು/ಶಿವಮೊಗ್ಗ: ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು, ರೈತರು ಹೈರಾಣಾಗಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಳೆಕೊಡಿಗೆ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ನೂರಾರು ಬಾಳೆ ಗಿಡಗಳನ್ನು ಮುರಿದು ಹಾನಿ ಮಾಡಿವೆ. ಕಾಡಾನೆಗಳಿಂದ ಹೊಳೆ ಕುಡಿಗೆ ಗ್ರಾಮದ ಬಾಸಮ್ಮ, ರಮೇಶ್ ಗೌಡ, ಲಕ್ಷ್ಮಣ ಗೌಡ, ಸತೀಶ್ ಗೌಡ ಎಂಬುವರ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಅರಣ್ಯ ಇಲಾಖೆ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಲೆನಾಡು ಭಾಗದಲ್ಲಿ ಮಿತಿಮೀರಿದ ಕಾಡಾನೆ ಹಾವಳಿ

ಕಾಡಾನೆಗಳು ದಾಳಿ ಮಾಡಿದ ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿ ರಂಗನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಳೆ ಹಾನಿಯಾಗಿರುವ ಬಗ್ಗೆ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಅಡಕೆ, ಶುಂಠಿ, ತೆಂಗು ಬೆಳೆ ನಾಶ: ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಚನ್ನಳ್ಳಿ ಗ್ರಾಮ, ಆನೆಸರ, ಮಂಜರಿಕೊಪ್ಪ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಭತ್ತ, ತೆಂಗು, ಶುಂಠಿ ಹಾಗೂ ಅಡಿಕೆ ತೋಟಕ್ಕೆ ನುಗ್ಗಿದ ಕಾಡಾನೆಗಳು ಬೆಳೆ ನಾಶ ಮಾಡಿವೆ. ಈ ಭಾಗದ ಎಂಟಕ್ಕೂ ಹೆಚ್ಚು ರೈತರ ಬೆಳೆ ನಾಶವಾಗಿದ್ದು, ಪರಿಹಾರ ನೀಡಬೇಕು ಎಂದು ಅನ್ನದಾತರು ಮನವಿ ಮಾಡಿದ್ದಾರೆ.

ಓದಿ: ಇಂದು 'ಸಮಾನತೆಯ ಪ್ರತಿಮೆ' ಉದ್ಘಾಟಿಸಲಿರುವ ಪಿಎಂ.. ಹೈದರಾಬಾದ್​ನಲ್ಲಿ ಮೋದಿ ಪರ್ಯಟನೆ ಹೀಗೆ ಸಾಗಲಿದೆ..

ಇನ್ನು ಆನೆ ಓಡಿಸುವಲ್ಲಿ ಹಾಗೂ ರೈತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಳಂಬ‌ ನೀತಿ ಅನುಸರಿಸುತ್ತಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಆಗಮಿಸದೇ ನಿರ್ಲಕ್ಷ್ಯ ತೋರುತ್ತಿದ್ದಾರೆ‌. ಬೆಳೆ ಪರಿಹಾರ ಸಹ ನೀಡುತ್ತಿಲ್ಲ ಎಂದು ಈ ಭಾಗದ ರೈತರು ಆರೋಪಿಸಿದ್ದಾರೆ‌.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.