ETV Bharat / city

ತಾಪಂ, ಜಿಪಂ ಚುನಾವಣೆ ಬಗ್ಗೆ ವಿಶೇಷ ಸಭೆಯಲ್ಲಿ ಚರ್ಚೆ ನಡೆಯಲಿದೆ: ಕಟೀಲ್ - ಬಿಜೆಪಿ ವಿಶೇಷ ಸಭೆಯಲ್ಲಿ ಜಿಲ್ಲಾ ತಾಲೂಕು ಪಂಚಾಯತಿ ಚುನಾವಣೆ ಚರ್ಚೆ

ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಅಭೂತಪೂರ್ವ ಜಯ ಗಳಿಸಿದ್ದಾರೆ. ಸದ್ಯ ಮುಂದೆ ಬರುವ ತಾಪಂ ಹಾಗೂ ಜಿಪಂ ಚುನಾವಣೆಯಲ್ಲೂ ಜಯ ಗಳಿಸುವ ಸಲುವಾಗಿ ನಾಳೆ ನಡೆಯಲಿರುವ ಬಿಜೆಪಿ ವಿಶೇಷ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಹೇಳಿದರು.

will-discus-about-future-elections-in-bjp-special-meeting
ಬಿಜೆಪಿ ವಿಶೇಷ ಸಭೆ
author img

By

Published : Jan 2, 2021, 9:14 PM IST

ಶಿವಮೊಗ್ಗ: ನಾಳೆ ನಡೆಯಲಿರುವ ಬಿಜೆಪಿ ವಿಶೇಷ ಸಭೆಯಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯ ಕುರಿತು ಚರ್ಚೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಗರು ಅಭೂತಪೂರ್ವ ಜಯ ಗಳಿಸಿದ ನಂತರ ಮುಂದೆ ಬರುವ ತಾಪಂ ಹಾಗೂ ಜಿಪಂ ಚುನಾವಣೆಯಲ್ಲೂ ಜಯ ಗಳಿಸುವ ಸಲುವಾಗಿ ಚರ್ಚೆ ನಡೆಸಲಾಗುವುದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​

ಯತ್ನಾಳ್ ಕುರಿತು ಕೇಂದ್ರೀಯ ಶಿಸ್ತು ಸಮಿತಿಗೆ ವರದಿ ಕಳುಹಿಸಲಾಗಿದ್ದು, ಈ ಕುರಿತು ಅವರು ಕ್ರಮ ತೆಗೆದುಕೊಳ್ಳಲಿದ್ದಾರೆ. ನರೇಂದ್ರ ಮೋದಿರವರು ವಿಶ್ವ ನಾಯಕರಾಗಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮೆರಿಕಾದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಗ್ಲೋಬಲ್ ಗೋಲ್ ಕೀಪರ್ ಪ್ರಶಸ್ತಿ ಗಳಿಸಿದ್ದಾರೆ. ಇದಕ್ಕಾಗಿ ರಾಜ್ಯ ಬಿಜೆಪಿ ಅಭಿನಂದನೆ ಸಲ್ಲಿಸುತ್ತದೆ ಎಂದರು.

ಓದಿ-ನಮ್ಮ ಜಾಗವನ್ನು ನಾವು ಭದ್ರ ಮಾಡಿಕೊಳ್ಳಲು ಬೋರ್ಡ್ ಹಾಕಿಸಿದ್ದೇವೆ: ಪ್ರಮೋದಾದೇವಿ ಒಡೆಯರ್

ಸಿಎಂ ಕುರ್ಚಿ ಅಲುಗಾಡುತ್ತಿಲ್ಲ

ರಾಜ್ಯದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿಲ್ಲ, ಹಾಗೇಯೇ ಖಾಲಿಯೂ ಇಲ್ಲ. ಮುಂದಿನ ಎರಡೂವರೆ ವರ್ಷ ಸಿಎಂ ಆಗಿ ಯಡಿಯೂರಪ್ಪ ಇರುತ್ತಾರೆ. ಆದರೆ ವಿರೋಧ ಪಕ್ಷದ ನಾಯಕನ ಸೀಟಿಗಾಗಿ ಟವಲ್ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹಾಸ್ಯದ ಧಾಟಿಯಲ್ಲಿ ಉತ್ತರಿಸಿದರು. ಅಲ್ಲದೆ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದರು.

ಲಸಿಕೆ ಹಾಕಿಸಿಕೊಳ್ಳುವ ವಿಚಾರ ಅವರಿಗೆ ಬಿಟ್ಟಿದ್ದು

ಯುಪಿ ಮಾಜಿ ಸಿಎಂ ಅಖಿಲೇಶ್​ ಯಾದವ್ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದಿಲ್ಲ ಎಂಬ ಹೇಳಿಕೆಯನ್ನು ನಾನು ರಾಜಕೀಯಗೊಳಿಸುವುದಿಲ್ಲ. ಕೋವಿಡ್ ಒಂದು ಸಾಂಕ್ರಮಿಕ ಕಾಯಿಲೆಯಾಗಿದೆ. ಸರ್ಕಾರ ಎಲ್ಲರಿಗೂ ಲಸಿಕೆ ನೀಡಲಿದೆ. ಆದರೆ ಅದನ್ನು ಪಡೆಯುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದರು.

ಎಸ್​​ಡಿಪಿಐ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಎಸ್​ಡಿಪಿಐ ಒಂದು ರಾಜಕೀಯ ಪಕ್ಷವಾಗಿದೆ. ಆದರೆ ಅದು ರಾಷ್ಟ್ರದ್ರೋಹಿ ಘೋಷಣೆ ಹಾಕಿದೆ. ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಘೋಷಣೆ ಕೂಗಿದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.

ಸಚಿವರ ಮೌಲ್ಯಮಾಪನದ ಅವಶ್ಯಕತೆಯಿಲ್ಲ

ನಮ್ಮ ಸಚಿವರ ಮೌಲ್ಯಮಾಪನದ ಅವಶ್ಯಕತೆ ಇಲ್ಲ. ಅವರು ಉತ್ತಮವಾಗಿ ಕೆಲಸ ಮಾಡಿದ ಪರಿಣಾಮ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿದ್ದೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.