ಶಿವಮೊಗ್ಗ: ಗಲಭೆ ಸೃಷ್ಟಿಸುವವರ ವಿರುದ್ಧ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶದ ರೀತಿ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಚಿಂತನೆ ನಡೆಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮೆರವಣಿಗೆ, ಉತ್ಸವ ನಡೆಯುವಾಗ ಗಲಾಟೆ, ಕಲ್ಲು ಹೊಡೆಯುವ ಪ್ರಕರಣಗಳು ನಡೆಯುತ್ತಿದೆ. ಇಂತಹ ಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಚಿಂತನೆ ಸರ್ಕಾರದ ಮುಂದಿದೆ ಎಂದರು.
ಮಸೀದಿ ಹಾಗೂ ಚರ್ಚ್ಗಳಲ್ಲಿ ಧ್ವನಿವರ್ಧಕಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮ ಸೇನಾ ಮುಖ್ಯಸ್ಥ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ಈ ಕುರಿತು ನೋಟಿಸ್ ನೀಡಲಾಗಿದೆ. ಪೂಜೆ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ 24 ಗಂಟೆ ಹೋಟೆಲ್ ತೆರೆಯುವ ಕುರಿತು ಹೋಟೆಲ್ ಮಾಲೀಕರು ಬೆಂಗಳೂರಿನ ಕಮಿಷನರ್ ಭೇಟಿ ಮಾಡಿ ಮಾತನಾಡಬೇಕು. ಬಿಬಿಎಂಪಿ ಅನುಮತಿ ಪಡೆಯಬೇಕು ಎಂದರು. ಹುಬ್ಬಳ್ಳಿಯ ಗಲಭೆಯ ತನಿಖೆ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರನ್ನೂ ರಕ್ಷಿಸುವ ಕೆಲಸವಾಗುತ್ತಿಲ್ಲ, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ.. ಏನೇ ಆದ್ರೂ ಕಾಂಗ್ರೆಸ್ ಕಾರಣ ಅಂತಾರೆ : ಡಿಕೆಶಿ