ETV Bharat / city

ಇನ್​ಸ್ಟಾಗ್ರಾಮ್​ನಲ್ಲಿ ಬ್ಲ್ಯಾಕ್‌ಮೇಲ್ ಮಾಡಿ ಯುವತಿಯ ಸಾವಿಗೆ ಕಾರಣನಾದವ ಅರೆಸ್ಟ್!

author img

By

Published : Apr 16, 2022, 7:04 PM IST

ಚನ್ನಗಿರಿಯ ಪುನೀತ್ ಎಂಬಾತ ಶಿಕಾರಿಪುರ ಯುವತಿಯೋರ್ವಳ ಅಶ್ಲೀಲ ವಿಡಿಯೋ ಪಡೆದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು. ಇದರಿಂದ ಯುವತಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ ಪುನೀತ್​ನನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ..

young man arrested who black mailed to Young lady in shivamogga
ಇನ್​ಸ್ಟಾಗ್ರಾಮ್​ನಲ್ಲಿ ಬ್ಲ್ಯಾಕ್​ ಮೇಲ್ ಮಾಡಿ ಯುವತಿಯ ಸಾವಿಗೆ ಕಾರಣನಾದವ ಅರೆಸ್ಟ್

ಶಿವಮೊಗ್ಗ: ಇನ್​ಸ್ಟಾಗ್ರಾಮ್​ನಲ್ಲಿ ಅಶ್ಲೀಲ ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್ ಮಾಡಿ ಯುವತಿ ಆತ್ಮಹತ್ಯೆಗೆ ಕಾರಣನಾದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳು 6ರಂದು ಇನ್​ಸ್ಟಾಗ್ರಾಮ್​ನಲ್ಲಿ ಯುವತಿ ಫೋಟೋ ಪಡೆದು ಆಕೆಯ ಫೋಟೋವನ್ನು ಡಿಪಿಗೆ ಹಾಕಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದವನನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.

ಶಿಕಾರಿಪುರ ತಾಲೂಕಿನ ತೊಗರ್ಸಿ ಗ್ರಾಮದ ಯುವತಿಯೋರ್ವಳ ಅಶ್ಲೀಲ ವಿಡಿಯೋ ಪಡೆದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು. ಇದರಿಂದ ಬೇಸತ್ತ ಯುವತಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಕುರಿತು ಶಿರಾಳಕೊಪ್ಪ ಪೊಲೀಸ್‌ ಠಾಣೆಗೆ ಯುವತಿಯ ತಂದೆ ದೂರು ನೀಡಿದ್ದರು.

ಇದನ್ನೂ ಓದಿ: ತಾಯಿಯಿಂದ ಬೇರ್ಪಟ್ಟ ಕರಿ ಚಿರತೆ ಮರಿ : ಕರುಳಬಳ್ಳಿಗಾಗಿ ಹುಡುಕಾಡಿದ ತಾಯಿ

ಪ್ರಕರಣ ದಾಖಲಿಸಿಕೊಂಡ ಶಿರಾಳಕೊಪ್ಪ ಪೊಲೀಸರು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಪುನೀತ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಕೇವಲ ಈ ಯುವತಿಗೆ ಮಾತ್ರ ಬ್ಲ್ಯಾಕ್‌ಮೇಲ್ ಮಾಡಿಲ್ಲ. ಇದೇ ರೀತಿ 20ಕ್ಕೂ ಹೆಚ್ಚು ಯುವತಿಯರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದ ಎಂಬ ಅಂಶವನ್ನು ತನಿಖೆ ವೇಳೆ ಬಾಯಿ ಬಿಟ್ಟಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.