ತುಮಕೂರು : ಶ್ರೀ ಸಿದ್ದಗಂಗಾ ಮಠಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲಿಗೆ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆದರು. ಇದೇ ವೇಳೆ ಗದ್ದುಗೆ ಬಳಿ ಹಾಜರಿದ್ದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೂವಿನ ಹಾರ ಹಾಕಿ ಬರಮಾಡಿಕೊಂಡರು. ನಂತರ ಗದ್ದಿಗೆ ಬಳಿ ವಿಶೇಷ ಮಹಾಮಂಗಳಾರತಿಯನ್ನು ಆಯೋಜನೆ ಮಾಡಲಾಗಿತ್ತು.
ಡಾ.ಶ್ರೀ ಶಿವಕುಮಾರ ಶ್ರೀಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ಮುಂಜಾನೆಯಿಂದ ಸಿದ್ಧಗಂಗಾ ಮಠದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಬಳಿಕ ಶ್ರೀಗಳ ಕಂಚಿನ ಪ್ರತಿಮೆ ಮೆರವಣಿಗೆ ಮಾಡಲಾಯಿತು.
ಐವತ್ತಕ್ಕೂ ಹೆಚ್ಚು ಮಠಾಧೀಶರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿದವು. ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ನೇತೃತ್ವದಲ್ಲಿ ಗದ್ದುಗೆಗೆ ವಿಶೇಷ ಪೂಜೆ, ಅಭಿಷೇಕ ನೆರವೇರಿಸಲಾಯಿತು.
ಇದನ್ನೂ ಓದಿ: ಎಲ್ಲಿವರೆಗೆ ಒಲೆ ಉರಿಯುತ್ತಿರುತ್ತದೆಯೋ ಅಲ್ಲಿಯವರೆಗೆ ಬಡ ಮಕ್ಕಳ ಹೊಟ್ಟೆ ತಣ್ಣಗಿರುತ್ತೆ; ಸಿಎಂ