ತುಮಕೂರು : ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಏಪ್ರಿಲ್‌ವರೆಗೆ ಪೋಕ್ಸೋ ಕಾಯ್ದೆಯಡಿ 169 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 28 ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಿದ್ದು, 31 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಕಲ್ಯಾಣ ಸಮಿತಿ ಬೀದಿ ಬದಿ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ 138 ಪ್ರಕರಣಗಳು ಬಾಕಿ ಉಳಿದಿವೆ. ಶಿಕ್ಷೆಯಾದ ಮೂರು ಪ್ರಕರಣಗಳ ಪೈಕಿ ಎರಡರಲ್ಲಿ ತಲಾ 6 ಲಕ್ಷ ಹಾಗೂ ಒಂದು ಪ್ರಕರಣದಲ್ಲಿ ಒಂದು ಲಕ್ಷ ಪರಿಹಾರ ನೀಡಲಾಗಿದೆ ಎಂದು ಹೇಳಿದರು.
ಹೆಚ್ಐವಿ ಬಾಧಿತ 278 ಮಕ್ಕಳಿಗೆ 31.99 ಲಕ್ಷ ರೂ. ಆರ್ಥಿಕ ನೆರವು ನೀಡಲಾಗಿದೆ. ಕೊರೊನಾದಿಂದ ಪೋಷಕರಿಬ್ಬರನ್ನು ಕಳೆದುಕೊಂಡು ಅನಾಥರಾಗಿರುವ ಎಂಟು ಮಕ್ಕಳಿಗೆ ತಲಾ ಮೂರು ಲಕ್ಷ ರೂ. ನೀಡಲಾಗಿದೆ. 2021ರ ಏಪ್ರಿಲ್‌ನಿಂದ ಈವರೆಗೆ ದತ್ತು ಕೇಂದ್ರಕ್ಕೆ 37 ಮಕ್ಕಳು ದಾಖಲಾಗಿದ್ದವು.
ಅವರಲ್ಲಿ 26 ಮಕ್ಕಳನ್ನು ದತ್ತು ನೀಡಲಾಗಿದೆ. ಕೇಂದ್ರದಲ್ಲಿ ಮಕ್ಕಳಿದ್ದು, ಅವರಲ್ಲಿ ಹನ್ನೊಂದು ಮಕ್ಕಳು ಅರ್ಹರಿದ್ದಾರೆ. ಏಪ್ರಿಲ್ ತಿಂಗಳವರೆಗೆ ನ್ಯಾಯ ಮಂಡಳಿಯಲ್ಲಿ 109 ಪ್ರಕರಣಗಳು ದಾಖಲಾಗಿದೆ. ಅವುಗಳಲ್ಲಿ 50 ಪ್ರಕರಣಗಳು ಇತ್ಯರ್ಥಗೊಂಡಿದ್ದು, 59 ಪ್ರಕರಣಗಳು ಬಾಕಿ ಉಳಿದಿವೆ ಎಂದು ವಿವರಿಸಿದರು.