ETV Bharat / city

ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಮೂವರ ಬಂಧನ - ಖೋಟಾ ನೋಟು

ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಆರೋಪದ ಮೇಲೆ ಮೂವರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ

ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಮೂವರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ
author img

By

Published : Mar 21, 2019, 3:48 AM IST

ತುಮಕೂರು: ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ತುಮಕೂರು ನಗರ ಪೊಲೀಸರು ಬಂಧಿಸಿದ್ದಾರೆ.

ಆಫ್ರೋಜ್, ಮಾರುತಿ, ತಮ್ಮಯ್ಯ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ 2000 ಮುಖ ಬೆಲೆಯ 53 ಹಾಗೂ 500 ರೂ ಮುಖಬೆಲೆಯ ಒಂದು ಖೋಟಾ ನೋಟನ್ನು ವಶಪಡಿಸಿಕೊಂಡಿದ್ದಾರೆ.

ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಮೂವರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ

ಬಂಧಿತರು ನಿನ್ನೆ ತುಮಕೂರು ನಗರದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಮೂವರು ಆರೋಪಿಗಳು ಖೋಟಾ ನೋಟು ಪ್ರಿಂಟ್ ಮಾಡುವ ಬಾಂಗ್ಲಾ ದೇಶಿಗರ ಸಂಪರ್ಕವನ್ನು ಹೊಂದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ತಿಳಿಸಿದ್ದಾರೆ.

Intro:ಖೋಟಾ ನೋಟು ಚಲಾವಣೆಗೆ ಯತ್ನಿಸುತ್ತಿದ್ದ ಮೂವರ ಬಂಧನ......

ತುಮಕೂರು
ಖೋಟಾನೋಟು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ತುಮಕೂರು ನಗರ ಪೊಲೀಸರು 54 ನಕಲಿ ನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಾರ್ಚ್ 19ರಂದು ಮಧ್ಯಾಹ್ನ ತುಮಕೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಖೋಟಾನೋಟು ಚಲಾವಣೆ ಮಾಡಲು ಮತ್ತು ಅದನ್ನು ಪಡೆಯಲು ಬಂದಿದ್ದ ಈ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 2000 ಮುಖಬೆಲೆಯ 53 ಕೋಟಾ ನೋಟು , 500 ರೂ ಮುಖಬೆಲೆಯ ಒಂದು ಕೋಟಾ ನೋಟನ್ನು ದಸ್ತಗಿರಿ ಮಾಡಿಕೊಂಡಿದ್ದಾರೆ.
ಆರೋಪಿಗಳಾದ ಆಫ್ರೋಜ್ , ಮಾರುತಿ , ತಮ್ಮಯ್ಯ ಎಂಬುವರನ್ನು ಬಂದಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.

Body:ಖೋಟಾ ನೋಟು ಪ್ರಿಂಟ್ ಮಾಡುವಂತಹ ಬಾಂಗ್ಲಾದೇಶಿಗರ ಸಂಪರ್ಕವನ್ನು ಈ ಮೂವರು ಆರೋಪಿಗಳು ಹೊಂದಿರಬಹುದೆಂಬ ಅನುಮಾನ ವ್ಯಕ್ತ ಪಡಿಸ ಲಾಗಿದ್ದು , ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ತಿಳಿಸಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.