ತುಮಕೂರು: ಡ್ರಗ್ ದಂಧೆಯಲ್ಲಿ ತೊಡಗಿರುವವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಿ, ಕಠಿಣ ಶಿಕ್ಷೆ ವಿಧಿಸುವ ಮೂಲಕ ಕರ್ನಾಟಕವನ್ನು ಡ್ರಗ್ ಮಕ್ತ ರಾಜ್ಯವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನಿಂದ ಪ್ರತಿಭಟಿಸಲಾಯಿತು.
ಡ್ರಗ್ ಜಾಲದ ಹಿಂದೆ ಪ್ರಭಾವಿ ವ್ಯಕ್ತಿಗಳು, ನಟ-ನಟಿಯರು, ರಾಜಕಾರಣಿಗಳ ಮಕ್ಕಳು ಇರುವ ಮಾಹಿತಿಗಳು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಡ್ರಗ್ ದಂಧೆಯಲ್ಲಿ ತೊಡಗಿರುವವರನ್ನು ದೇಶದ್ರೋಹ ಪ್ರಕರಣದಲ್ಲಿ ಬಂಧಿಸಿ, ಕಠಿಣ ಶಿಕ್ಷೆ ವಿಧಿಸುವ ಮೂಲಕ ಕರ್ನಾಟಕವನ್ನು ಡ್ರಗ್ ಮಕ್ತ ರಾಜ್ಯವನ್ನಾಗಿ ಮಾಡಬೇಕು.
ದೇಶದ ಯುವ ಶಕ್ತಿಯನ್ನು ರಕ್ಷಿಸಿಕೊಳ್ಳಲು ಹಾಗೂ ಡ್ರಗ್ ಜಾಲವನ್ನು ಸಂಪೂರ್ಣವಾಗಿ ಬುಡಸಮೇತ ಕಿತ್ತುಹಾಕಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಕ್ತಿಮೀರಿ ಕೆಲಸ ಮಾಡಬೇಕು. ರಾಜ್ಯ ಸರ್ಕಾರ ಡ್ರಗ್ ನಿಯಂತ್ರಣಕ್ಕೆ ಕಠಿಣವಾದ ಕಾನೂನುಗಳನ್ನು ರೂಪಿಸಿ, ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.