ತುಮಕೂರು: ಎಲ್ಕೆಜಿ-ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಿಸುವ ಮೂಲಕ ಉನ್ನತೀಕರಣ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿಐಟಿಯು ನೇತೃತ್ವದಲ್ಲಿ ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನಾ ಮೆರೆವಣಿಗೆ ನಡೆಸಿದರು. ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ-ಯುಕೆಜಿ ಶಿಕ್ಷಣ ಒದಗಿಸಬೇಕು. ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ 3 ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಇಡುಗಂಟು ತಕ್ಷಣ ಬಿಡುಗಡೆ ಮಾಡಬೇಕು. ನಿವೃತ್ತಿ ಹೊಂದಿದವರಿಗೆ ಕನಿಷ್ಠ 6,000 ರೂ. ಪಿಂಚಣಿ ನೀಡಬೇಕು ಎಂದು ಆಗ್ರಹಹಿಸಿ ಪ್ರತಿಭಟನೆ ನಡೆಸಲಾಯಿತು.