ETV Bharat / city

ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ : ಐವರ ಬಂಧನ - ತುಮಕೂರು ಜಿಲ್ಲಾ ಪೊಲೀಸರು

ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ಅಕ್ಟೋಬರ್ 19ರಂದು ಇಬ್ಬರು ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

assault-on-bajrang-dal-activist-5-arrested
ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ : ಐವರ ಬಂಧನ
author img

By

Published : Oct 21, 2021, 2:29 AM IST

ತುಮಕೂರು : ಬಜರಂಗದಳ ಕಾರ್ಯಕರ್ತರಾದ ಮಂಜುನಾಥ ಹಾಗೂ ರವಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 19ರಂದು ಸಂಜೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ದುಷ್ಕರ್ಮಿಗಳು ಇಬ್ಬರ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳನ್ನು ಬಂಧಿಸಲು ಎರಡು ತಂಡಗಳನ್ನು ರಚನೆ ಮಾಡಲಾಗಿತ್ತು. ಇದೀಗ ಐವರನ್ನು ಬಂಧಿಸಲಾಗಿದ್ದು, ಇನ್ನುಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ತುಮಕೂರು ನಗರದಲ್ಲಿ ದಿನದ 24 ಗಂಟೆಯೂ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Assault on Bajrang Dal activist: 5 arrested
ತುಮಕೂರು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ

ಇನ್ನು ತುಮಕೂರು ನಗರದ ಹಾಗೂ ರಿಂಗ್ ರಸ್ತೆಯಲ್ಲಿ ವ್ಹೀಲಿಂಗ್​​ ಮಾಡುವುದಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದು, ವ್ಹೀಲಿಂಗ್​ ಅನ್ನು ನಿಯಂತ್ರಣ ಮಾಡಲು ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವೇಶ್ಯಾವಾಟಿಕೆ ಟೂರಿಸಂ ದಂಧೆ: ಇಬ್ಬರು ಆರೋಪಿಗಳು ಅಂದರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.