ತುಮಕೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅದರರ್ಥ ಬಿಜೆಪಿ ವೀಕ್ ಆಗಿದೆ ಅಂತಲ್ಲ. ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಬೇಕು ಎಂದು ಜೆಡಿಎಸ್ ಬೆಂಬಲ ಕೋರಿದ್ದರು ಅಷ್ಟೇ. ಬಿಜೆಪಿ ವೀಕ್ ಆಗಿದೆಯಾ ಎನ್ನುವ ಪ್ರಶ್ನೆಯೇ ಬರುವುದಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯ 25 ಕ್ಷೇತ್ರಗಳ ಪೈಕಿ ಕನಿಷ್ಠ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ವೇಳೆ ಯಡಿಯೂರಪ್ಪ ಅವರು ನೀಡಿದ್ದ ಭರವಸೆಯಂತೆ ಮದಲೂರು ಕೆರೆಗೆ ನೀರು ಹರಿಸಲಾಗಿದೆ. ರೈತರ ಪರವಾಗಿ ಯಡಿಯೂರಪ್ಪ ಅವರು ಕೆಲಸ ಮಾಡಿದ್ದಾರೆ. ರೈತರ ಸಂತಸಕ್ಕೆ ಕಾರಣರಾಗಿದ್ದಾರೆ. ಅಲ್ಲದೇ ಇತ್ತೀಚೆಗೆ ಸುರಿದ ಭಾರಿ ಮಳೆ ಹಿನ್ನೆಲೆ ಮದಲೂರು ಕೆರೆ ತುಂಬಿ ಕೋಡಿ ಬಿದ್ದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬಿಜೆಪಿ 15 ಗೆಲ್ಲೋದಾದ್ರೆ ಯಾವುದು 10 ಸೋಲುತ್ತಾರೆ ಅನ್ನೋದನ್ನ ಹೇಳಬೇಕಲ್ಲ : ಡಿ ಕೆ ಶಿವಕುಮಾರ್