ತುಮಕೂರು: ಪಂಚಮಸಾಲಿ ಸಮಾಜ ಹಾಗೂ ಲಿಂಗಾಯತ ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ನೀಡಬೇಕು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯಗಳಿಗೆ ಮೀಸಲಾತಿ ಘೋಷಣೆ ಮಾಡದಿದ್ದರೆ ಪಂಚ ಲಕ್ಷ ಹೆಜ್ಜೆಗಳ ಬೃಹತ್ ಪಾದಯಾತ್ರೆ ನಡೆಸಲಾಗುವುದು. ಪಾದಯಾತ್ರೆಯನ್ನು ಕೂದಲ ಸಂಗಮದಿಂದ ಆರಂಭಿಸಿ ಬೆಂಗಳೂರಿನ ಆಡಳಿತ ಕಚೇರಿ ವರೆಗೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.